Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!

Hassan Pen Drive Case: ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್‌ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Written by - Puttaraj K Alur | Last Updated : Apr 29, 2024, 07:09 PM IST
  • ನಮ್ಮ ಕುಟುಂಬವೇ ಬೇರೆ, ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ
  • ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ
  • ತಪ್ಪು ಯಾರೇ ಮಾಡಿದರೂ ಶಿಕ್ಷೆ ಆಗಲೇಬೇಕು ಎಂದ ಎಚ್.ಡಿ.ಕುಮಾರಸ್ವಾಮಿ
Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ! title=
ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ

Hassan Pen Drive Case: ದೇಶದಾದ್ಯಂತ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಖತ್‌ ಸದ್ದು ಮಾಡ್ತಿದೆ. ಸಿಎಂ ಸಿದ್ದರಾಮಯ್ಯನವರು ಈ ಪ್ರಕರಣವನ್ನು SIT ತನಿಖೆಗೆ ವಹಿಸಿದ್ದಾರೆ. SIT ತನಿಖೆಗೂ ಮೊದಲು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಲೈಂಗಿಕ ಕಿರುಕುಳ ಆರೋಪದ ಮೇರೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ FIR ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ರೇವಣ್ಣ A ಆರೋಪಿಯಾಗಿದ್ದರೆ, ಪ್ರಜ್ವಲ್‌ A ಆರೋಪಿಯಾಗಿದ್ದಾರೆ. 

ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್‌ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿದ ನಂತರ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಾಗಲಕೋಟೆ,ವಿಜಯಪುರಕ್ಕೆ ಇಂದು ಮೋದಿ ಎಂಟ್ರಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ SIT ತನಿಖೆ ಆರಂಭವಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಸೋಮವಾರ ಮಾತನಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ʼನಮ್ಮ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ ಅಂತಾ ಹೇಳಿದ್ದಾರೆ. ತಪ್ಪು ಯಾರೇ ಮಾಡಿದರೂ ಶಿಕ್ಷೆ ಆಗಲೇಬೇಕು. ತಪ್ಪು ಮಾಡಿದವರಿಗೆ ಪಕ್ಷದಿಂದ ಶಿಸ್ತುಕ್ರಮ ಆಗುತ್ತದೆ ಅಂತಾ ಹೇಳಿದ್ದಾರೆ. 

ಈ ಪ್ರಕರಣ ಸಂಬಂಧ SIT ರಚನೆಯಾಗಿದೆ. ಯಾರು ತಪ್ಪು ಮಾಡಿದರು ಕಾನೂನಿಗೆ ತಲೆ ಬಾಗಲೇಬೇಕು. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು. ಇದರಲ್ಲಿ ಕುಟುಂಬವನ್ನು ತರುವುದು ಬೇಡ. ಇದು ವ್ಯಕ್ತಿಯ ಪ್ರಶ್ನೆ. ಹೀಗಾಗಿ ವ್ಯಕ್ತಿಯನ್ನು ಪ್ರಶ್ನೆ ಮಾಡಿ. ಅದನ್ನು ನಾನು ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈಗಾಗಲೇ FIR ಹಾಕಿದ್ದಾರೆ, ಈ ಬಗ್ಗೆ ತನಿಖೆಯಾಗಲಿ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರಗೆ ಬರಲಿ. ಪೆನ್‌ಡ್ರೈವ್ ಯಾರು ಬಿಟ್ಟಿದ್ದಾರೆ ಅನ್ನೋದರ ಸತ್ಯ ಹೊರಬರಲಿ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಸಂಸದ ಶ್ರೀನಿವಾಸ್‌ ಪ್ರಸಾದ್ ನಿಧನಕ್ಕೆ ಯಡಿಯೂರಪ್ಪ‌ ಸಂತಾಪ

ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್‌ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು. ಪಕ್ಷದಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಮಹಿಳೆಯರಿಗೆ ದೇವೇಗೌಡರು ಹಾಗೂ ನಾನು ಗೌರವದಿಂದ ನಡೆದುಕೊಂಡಿದ್ದೇನೆ. ಅವರ ಕುಟುಂಬವೇ ಬೇರೆ... ಅವರು ನಾಲ್ಕು ಜನ ಬೇರೆ ಇದ್ದಾರೆ. ನಮ್ಮ ಕುಟುಂಬವೇ ಬೇರೆ ಇದ್ದೇವೆ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News