ಈ ದಿನ ಕ್ರಿಕೆಟ್ ಬದುಕಿಗೆ ವಿದಾಯ ಹೇಳುತ್ತೇನೆ ! ಕೊನೆಗೂ ನಿವೃತ್ತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

Virat Kohli:ಮೇ 18 ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುವ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿಗೆ ನಿವೃತ್ತಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು.   

Written by - Ranjitha R K | Last Updated : May 16, 2024, 02:02 PM IST
  • ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ.
  • ವಿರಾಟ್ ಕೊಹ್ಲಿ ಐಪಿಎಲ್ 2024 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
  • ನಿವೃತ್ತಿ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ
ಈ ದಿನ ಕ್ರಿಕೆಟ್ ಬದುಕಿಗೆ  ವಿದಾಯ ಹೇಳುತ್ತೇನೆ ! ಕೊನೆಗೂ ನಿವೃತ್ತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ title=

Virat Kohli: ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ.ವಿರಾಟ್ ಕೊಹ್ಲಿ ಐಪಿಎಲ್ 2024 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.ವಿರಾಟ್ ಕೊಹ್ಲಿ ಐಪಿಎಲ್ 2024ರ 13 ಪಂದ್ಯಗಳಲ್ಲಿ 66.10 ರ ಸರಾಸರಿಯಲ್ಲಿ 661 ರನ್ ಗಳಿಸಿದ್ದಾರೆ.ಇದರಲ್ಲಿ 1 ಶತಕ ಮತ್ತು 5 ಅರ್ಧ ಶತಕ ಸೇರಿದೆ. 2024 ರ ಟಿ 20 ವಿಶ್ವಕಪ್‌ನಲ್ಲಿಯೂ ವಿರಾಟ್ ಕೊಹ್ಲಿಯಿಂದ ಸ್ಫೋಟಕ ಪ್ರದರ್ಶವನ್ನೇ ನಿರೀಕ್ಷಿಸಲಾಗುತ್ತಿದೆ. 

ನಿವೃತ್ತಿ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ :
ವಿರಾಟ್ ಕೊಹ್ಲಿ ಈ ವರ್ಷದ ನವೆಂಬರ್‌ನಲ್ಲಿ 36ನೇ ವರ್ಷಕ್ಕೆ ಕಾಲಿಡಲಿದ್ದಾರೆ. ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಫಿಟ್ ಆಟಗಾರರೆಂದು ಪರಿಗಣಿಸಲ್ಪಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇನ್ನೂ 3 ವರ್ಷವಾದರೂ ಕ್ರಿಕೆಟ್ ಆಡಬಹುದು.ಮೇ 18 ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುವ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿಗೆ ನಿವೃತ್ತಿಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. 

ಇದನ್ನೂ ಓದಿ : T20 World Cup : ಸ್ಕಾಟ್ಲೆಂಡ್ ತಂಡದ T20 ವಿಶ್ವಕಪ್ ಜರ್ಸಿಯಲ್ಲಿ ನಂದಿನಿ ಬ್ರಾಂಡ್ ಲೋಗೋ

ವಿರಾಟ್ ಕೊಹ್ಲಿ ನಿವೃತ್ತಿ ಯಾವಾಗ ?:  
ಈ ವೇಳೆ ಮಾತನಾಡಿದ ವಿರಾಟ್ ಕೊಹ್ಲಿ,'ನನ್ನ ವೃತ್ತಿಜೀವನವನ್ನು ಅಪೂರ್ಣವಾಗಿ ಬಿಡಲು ನನಗೆ ಇಷ್ಟವಿಲ್ಲ ಎಂದಿದ್ದಾರೆ.ನನ್ನ ಕೆಲಸ ಮುಗಿದಿದೆ ಎಂದಾದರೆ ನಾನೇ ಬಿಟ್ಟು ಹೋಗುತ್ತೇನೆ. ಹಾಗಾಗಿ ಎಲ್ಲಿಯವರೆಗೆ ನನಗೆ ಆಡಲು ಸಾಧ್ಯವೋ ಅಲ್ಲಿಯವರೆಗೆ ಆಡಲು ಬಯಸುತ್ತೇನೆ ಎಂದಿದ್ದಾರೆ. ಅಲ್ಲದೆ, ನಿವೃತ್ತಿಯ ನಂತರ ಸ್ವಲ್ಪ ಸಮಯದವರೆಗೆ ಯಾರ ಕಣ್ಣಿಗೂ ಬೀಳುವುದಿಲ್ಲ ಎಂದು ಕೂಡಾ ಹೇಳಿದ್ದಾರೆ. 

ವಿರಾಟ್ ಕೊಹ್ಲಿಯ ದಾಖಲೆಗಳು : 
ವಿರಾಟ್ ಕೊಹ್ಲಿ ಭಾರತ ಪರ ಇದುವರೆಗೆ 113 ಟೆಸ್ಟ್, 292 ಏಕದಿನ ಹಾಗೂ 117 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.ವಿರಾಟ್ ಕೊಹ್ಲಿ 113 ಟೆಸ್ಟ್ ಪಂದ್ಯಗಳಲ್ಲಿ 49.16 ಸರಾಸರಿಯಲ್ಲಿ 8848 ರನ್ ಗಳಿಸಿದ್ದಾರೆ.ಇದರಲ್ಲಿ 29 ಶತಕಗಳು ಮತ್ತು 30 ಅರ್ಧ ಶತಕಗಳು ಸೇರಿವೆ.ಈ ಅವಧಿಯಲ್ಲಿ ಅವರ ಅತ್ಯುತ್ತಮ ಸ್ಕೋರ್ 254 ರನ್ ಆಗಿತ್ತು. ವಿರಾಟ್ ಕೊಹ್ಲಿ ಇದುವರೆಗೆ 292 ODI ಪಂದ್ಯಗಳಲ್ಲಿ 58.68 ಸರಾಸರಿಯಲ್ಲಿ 13,848 ರನ್ ಗಳಿಸಿದ್ದಾರೆ.ಇದರಲ್ಲಿ 50 ಶತಕಗಳು ಮತ್ತು 72 ಅರ್ಧ ಶತಕಗಳು ಸೇರಿವೆ. ಈ ಅವಧಿಯಲ್ಲಿ ಅವರ ಅತ್ಯುತ್ತಮ ಸ್ಕೋರ್ 183 ರನ್ ಆಗಿತ್ತು.

ಇದನ್ನೂ ಓದಿ : Sunil Chhetri: ಕುವೈತ್ ವಿರುದ್ಧದ ಫಿಫಾ ವಿಶ್ವಕಪ್ ಪಂದ್ಯದ ನಂತರ ಫುಟ್ಬಾಲ್ ಐಕಾನ್ ಸುನಿಲ್ ಛೆಟ್ರಿ ನಿವೃತ್ತಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=O-hDphMYFMg

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News