ಈಡನ್ ಗಾರ್ಡನ್ಸ್ ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಭಾರತ-ಬಾಂಗ್ಲಾದೇಶ ಟೆಸ್ಟ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯುತ್ತಿದ್ದು. ಇಂತಹ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಈಗ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಕೂಡ ಕೊಲ್ಕತ್ತಾಗೆ ಆಗಮಿಸಿದ್ದಾರೆ.
ಇಂದೋರ್ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು ಇನ್ನಿಂಗ್ಸ್ ಸಹಿತ 130 ರನ್ಗಳಿಂದ ಸೋಲಿಸಿದ ನಂತರ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
ಇಂದೋರ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ತನ್ನ ಆಲ್ ರೌಂಡ್ ಪ್ರದರ್ಶನದಿಂದಾಗಿ ಇನ್ನಿಂಗ್ಸ್ ಸಹಿತ 130 ರನ್ಗಳಿಂದ ಮಣಿಸಿತು. ಈ ಗೆಲುವಿನಿಂದಾಗಿ ಭಾರತ ತಂಡವು ಈಗ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಹೊನಲು ಬೆಳಕಿನ ಟೆಸ್ಟ್ ಪಂದ್ಯ ನಡೆಸಬೇಕೆಂಬ ಬಹುದಿನದ ಕನಸು ಈಗ ನನಸಾಗಲಿದೆ. ಆ ಮೂಲಕ ಈಗ ಕ್ರಿಕೆಟ್ ಅಭಿಮಾನಿಗಳು ಇನ್ನು ಮುಂದೆ ರಾತ್ರಿ ವೇಳೆ ಸಹಿತ ಟೆಸ್ಟ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ನವೆಂಬರ್ 3 ರಿಂದ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ -20 ಅಂತರರಾಷ್ಟ್ರೀಯ (ಟಿ 20 ಐ) ಸರಣಿಗೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ.
ಭಾರತದ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಢಾಕಾದಿಂದ ದುಬೈಗೆ ತೆರಳುತ್ತಿದ್ದ ವಿಮಾನ ಬಿಜಿ 147 ಅನ್ನು ಹೈಜಾಕ್ ಮಾಡಲು ಪ್ರಯತ್ನಿಸಿದ್ದರಿಂದ, ಚಿತ್ತಗಾಂಗ್ನ ಷಾ ಅಮನತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.
ಪ್ರತಿವರ್ಷ ಡಿಸೆಂಬರ್ 16 ಭಾರತಕ್ಕೆ ಸ್ಮರಣೀಯ ದಿನ, ಏಕೆಂದರೆ ಈ ದಿನ ಭಾರತ ಬಾಂಗ್ಲಾದೇಶದ ವಿಮೋಚನೆಗಾಗಿ ಹೋರಾಡಿ ಪಾಕ್ ವಿರುದ್ದ ಗೆಲುವು ಸಾಧಿಸಿದ ದಿನ.ಆ ಮೂಲಕ ಪೂರ್ವ ಪಾಕಿಸ್ತಾನದಿಂದ ಬಾಂಗ್ಲಾ ಪ್ರತ್ಯೇಕಗೊಂಡು ಬಾಂಗ್ಲಾದೇಶ ಎಂದು ಹೆಸರಾಯಿತು.
1971 ರಲ್ಲಿ ಈ ದಿನದಂದು ಯುದ್ದವು ಅಂತ್ಯಗೊಂಡು ಪಾಕಿಸ್ತಾನದ ಸೈನ್ಯವು ಬೇಷರತ್ತಾದ ಶರಣಾಗತಿಯಾಯಿತು. ಪಾಕಿಸ್ತಾನದ ಸೈನ್ಯದ ಮುಖ್ಯಸ್ಥರಾದ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ, 93,000 ಪಡೆ ಭಾರತೀಯ ಸೈನ್ಯ ಮತ್ತು ಮುಕ್ತಿ ಬಾಹಿಣಿಗೆ ಶರಣಾಗತಿಯಾಯಿತು.ಆದ್ದರಿಂದ ಭಾರತದಲ್ಲಿ ಈ ದಿನವನ್ನು ಯುದ್ದದಲ್ಲಿ ರಾಷ್ಟ್ರಕ್ಕಾಗಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸುವ ಮೂಲಕ ದೇಶದಲ್ಲೆಡೆ ಈ ದಿನವನ್ನು ಆಚರಿಸಲಾಗುತ್ತದೆ.
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3 ವಿಕೆಟ್ ಜಯ ಸಾಧಿಸಿ ಭಾರತ ಕ್ರಿಕೆಟ್ ತಂಡವನ್ನು ಪ್ರಶಂಸಿಸಿದ್ದಾರೆ. ಅಲ್ಲದೆ ಇದೆ ಸಂದರ್ಭದಲ್ಲಿ ಬಾಂಗ್ಲಾದೇಶಕ್ಕೂ ಕೂಡ ಮೆಚ್ಚುಗೆಯ ಸಂದೇಶ ರವಾನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.