ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ : ನಟ ಕಿಶೋರ್‌ 

ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ.. ಅದಾವುದೂ ಇಲ್ಲದ ವಿಶ್ವ ಕಂಡ.. ಅತೀ ಸುಳ್ಳುಗಾರ, ಅತೀ ಪುಕ್ಕಲು ಎಂದು ಮೋದಿ ವಿರುದ್ಧ ನಟ ಕಿಶೋರ್‌ ಹರಿಹಾಯ್ದಿದ್ದಾರೆ.

Written by - Krishna N K | Last Updated : May 17, 2024, 10:11 AM IST
    • ಮೋದಿ ವಿರುದ್ಧ ಗುಡುಗಿದ ನಟ ಕಿಶೋರ್‌
    • ಇದೀಗ ಮತ್ತೊಮ್ಮೆ ಪಿಎಂ ಮೇಲೆ ವಾಗ್ದಾಳಿ ನಡೆಸಿದ್ದಾರೆ
    • ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ
ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ : ನಟ ಕಿಶೋರ್‌  title=

Kishore on PM Modi : ಬಹುಭಾಷಾ ನಟ ಕಿಶೋರ್‌ ತಮ್ಮ ನಟನೆಯಿಂದ ಅಷ್ಟೇ ಅಲ್ಲದೆ, ಸಾಮಾಜಿಕ ಆಚಾರ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇನ್ನು ಆಗಾಗ ಬಿಜೆಪಿ ಮತ್ತು ಮೋದಿ ವಿರುದ್ದ ಗುಡುಗುವ ನಟ ಇದೀಗ ಮತ್ತೊಮ್ಮೆ ಪಿಎಂ ಮೇಲೆ ವಾಗ್ದಾಳಿ ನಡೆಸಿದ್ದಾರೆ. 

ಹೌದು.. ಸ್ಯಾಂಡಲ್‌ವುಡ್‌ ಸೇರಿದಂತೆ ಹಲವರು ಭಾಷೆಗಳ ಸಿನಿಮಾದಲ್ಲಿ ನಟಿಸಿ ಸೌತ್‌ ಸಿನಿರಂಗದಲ್ಲಿ ತಮ್ಮದೆಯಾದ ಛಾಪು ಮೂಡಿಸಿರುವ ನಟ ಕಿಶೋರ್‌, ರಾಜಕೀಯ ವಲಯದಲ್ಲಿ ನಡೆಯುವ ಘಟನೆ, ಆಗುಹೋಗುಗಳ ಕುರಿತು ಮಾತನಾಡುತ್ತಿರುತ್ತಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯವಾಗಿರುವ ನಟ, ಅದರಲ್ಲೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸದಾ ಹರಿಹಾಯುತ್ತಲೇ ಇರುತ್ತಾರೆ. 

ಇದನ್ನೂ ಓದಿ: ಖ್ಯಾತ ಕನ್ನಡ ನಿರ್ಮಾಪಕರೊಂದಿಗೆ ಅನುಷ್ಕಾ ಶೆಟ್ಟಿ ಮದುವೆ?! ಸ್ವೀಟಿ ಕೈಹಿಡಿಯೋ ವರ ಯಾರು ಗೊತ್ತಾ?

ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ.. ಅದಾವುದೂ ಇಲ್ಲದ ವಿಶ್ವ ಕಂಡ.. ಅತೀ ಸುಳ್ಳುಗಾರ, ಅತೀ ಪುಕ್ಕಲು, ಅತೀ ನಿಕೃಷ್ಠ, ಅತೀ ದುರಹಂಕಾರಿ, ಅತೀ ಕ್ರೂರ, ಅತೀ ಮೂರ್ಖ, ಅತೀ ಸಂವೇದನಾಹೀನ, ಅತೀ ಘನತೆಹೀನ, ಅತೀ ಆತ್ಮರತಿಲೋಲ, ಅತೀ ಜನವಿರೋಧಿ, ಅತೀ ಹೊಲಸು ನಾಲಿಗೆಯ, ಅತೀ ಸಂಕುಚಿತ ದೃಷ್ಟಿಯ, ಅತೀ ಅಪಾಯಕಾರಿ ಅತೀ ಭ್ರಷ್ಟ ನಿರಂಕುಶ ಪ್ರಭುತ್ವವಾದಿ ಎಂದು ಆಧಾರಸಹಿತ ಆ ಮನುಷ್ಯನೇ (?) ಹೇಳಿಬಿಡುತ್ತಾನೆ ಬೇಕಿದ್ದರೆ ಅವನ ನಡೆ ನುಡಿಯನ್ನು ನೋಡಿ.

10 ವರ್ಷ ಅಧಿಕಾರವಿದ್ದೂ ಮಾಡಿದ ಕೆಲಸದ ಬಗ್ಗೆ, ರೈತರ, ಸೈನಿಕರ, ಮಹಿಳೆಯರ, ಮಕ್ಕಳ, ಆಸ್ಪತ್ರೆ ಕಾಲೇಜುಗಳ ಅಭಿವೃದ್ಧಿಯ ಬಗ್ಗೆ ಮಾತಾಡಲು ಯೋಗ್ಯತೆಯಿಲ್ಲದೇ.. ಬರೀ ಸುಳ್ಳು, ದ್ವೇಷ ಕಾರುವುದು..
ಮುಸ್ಲಿಂ ತೆರಿಗೆಯಂತೆ, ನುಸುಳುಕೋರರಂತೆ, ಪಾಕೀಸ್ಥಾನವಂತೆ, ರೂಮು ಕಿತ್ಕೊತಾರಂತೆ, ಎಮ್ಮೆ ಕಿತ್ಕೊತಾರಂತೆ, ಸೈಕಲ್ ಕಿತ್ಕೊತಾರಂತೆ, ವೋಟು ಜಿಹಾದ್ ಅಂತೆ ಮಂದಿರಕ್ಕೆ ಬೀಗವಂತೆ. 

ಇದನ್ನೂ ಓದಿ:ದೀಪಿಕಾ ಮುಡಿಗೇರಿತು ವಿಶ್ವ ಮಟ್ಟದ ವಿಶೇಷ ಪ್ರಶಸ್ತಿ..! ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಈಕೆ

ಬರೀ ತಲೆಬುಡವಿಲ್ಲದ ಮಾತುಗಳು, ಮುಸ್ಲಿಂ ಬಯೋತ್ಪಾದಕರು ಇಸ್ಲಾಂನ ಮಾನ ಕಳೆದಂತೆ ಅಧಿಕಾರಕ್ಕಾಗಿ ಹಿಂದೂ ಬಣ್ಣ ಬಳಿದುಕೊಂಡ ಈ ಢೋಂಗಿ ಮನುಷ್ಯ ಹಿಂದೂ ಧರ್ಮದ ಮಾನ ವಿಶ್ವದಾದ್ಯಂತ ಮೂರು ಕಾಸಿಗೆ ಹರಾಜು ಹಾಕಿಬಿಟ್ಟ.. ಎಂದು ನರೇಂದ್ರ ಮೋದಿ ವಿರುದ್ಧ ನಟ ಕಿಶೋರ್‌ ಗುಡುಗಿದ್ದಾರೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News