‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಸಿನಿಮಾ ಪೋಸ್ಟರ್ ಬಿಡುಗಡೆಗೊಳಿಸಿದ ನಿರ್ದೇಶಕ ಸಿಂಪಲ್ ಸುನಿ

Bank of Bhagyalakshmi: ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.

Written by - YASHODHA POOJARI | Last Updated : May 18, 2024, 08:53 PM IST
    • ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್
    • ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ
    • ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ
‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಸಿನಿಮಾ ಪೋಸ್ಟರ್ ಬಿಡುಗಡೆಗೊಳಿಸಿದ ನಿರ್ದೇಶಕ ಸಿಂಪಲ್ ಸುನಿ    title=
Bank of Bhagyalakshmi

Bank of Bhagyalakshmi: 'ರಂಗಿ ತರಂಗ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ತಮ್ಮ ನಿರ್ಮಾಣದ 5ನೇ ಚಿತ್ರದ ಪೋಸ್ಟರ್ ಇತ್ತೀಚಿಗೆ ಬಿಡುಗಡೆ ಮಾಡಿದ್ದಾರೆ. ದಿಯಾ, ದಸರಾ, KTM  ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: T20 World Cup: ಮೇ 25ರಂದು ಅಮೆರಿಕಾಗೆ ಹಾರಲಿದೆ ಟೀಂ ಇಂಡಿಯಾ ಮೊದಲ ತಂಡ

ಚಿತ್ರಕ್ಕೆ ಅಭಿಷೇಕ್ ಎಂ ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', ‘ಬಹುಪರಾಕ್' ಮತ್ತು ‘ಆಪರೇಷನ್ ಅಲಮೇಲಮ್ಮ' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗೂ ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ 'ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ.

ಬ್ಯಾಂಕ್’ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ

ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತ 80 ಪ್ರತಿಶತ ಚಿತ್ರೀಕರಣ ಮುಗಿದಿದೆ‌‌. ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಅಂತೆಯೇ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಮಧುಮೇಹಿಗಳಿಗೆ ಅಮೃತಕ್ಕೆ ಸಮ ಈ ಹಣ್ಣು: ತಿಂದ ತಕ್ಷಣ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್ ಲೆವೆಲ್!

ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News