Poonch Attack: ಕಾಶ್ಮೀರದಲ್ಲಿ ವಾಯುಪಡೆ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ, 4 ಮಂದಿಗೆ ಗಾಯ !

jammu kasjmir attack: ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. 

Written by - Chetana Devarmani | Last Updated : May 5, 2024, 11:36 AM IST
  • ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರ ದಾಳಿ
  • ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ
  • ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ
Poonch Attack: ಕಾಶ್ಮೀರದಲ್ಲಿ ವಾಯುಪಡೆ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ, 4 ಮಂದಿಗೆ ಗಾಯ !  title=

terror attack in poonch: ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಈ ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೇ ನಾಲ್ವರು ಯೋಧರು ಗಾಯಗೊಂಡಿದ್ದಾರೆ. 

ಸುರನ್‌ಕೋಟ್‌ನ ಸನೈ ಗ್ರಾಮದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಭಾರತೀಯ ಸೇನೆ, ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಹೀಗಿರುವಾಗ ಪಾಕಿಸ್ತಾನದ ಷಡ್ಯಂತ್ರದಡಿ ನಡೆದಿರುವ ಈ ದಾಳಿಯು 2019ರ ಪುಲ್ವಾಮಾ ದಾಳಿಯನ್ನು ಪುನರಾವರ್ತಿಸುವ ಷಡ್ಯಂತ್ರವೇ ಎಂಬ ಪ್ರಶ್ನೆ ಈಗ ಕಾಡುತ್ತಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಭಾರತೀಯ ವಾಯುಪಡೆಯ ಗರುಡ್ ಸ್ಪೆಷಲ್‌ ಫೋರ್ಸ್‌ ಅನ್ನು ಕೂಡ ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಶನಿವಾರ ಸಂಜೆ ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದರು. ಈ ವೇಳೆ ವಾಯುಸೇನೆಯ ಬೆಂಗಾವಲು ವಾಹನದ ಮೇಲೆ ಭಾರೀ ಗುಂಡಿನ ದಾಳಿ ನಡೆಸಲಾಯಿತು. ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರು ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕಿ ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಪತನ 

ದಾಳಿಯ ಮಾಹಿತಿ ಪಡೆದ ತಕ್ಷಣ ಸೇನಾ ತುಕಡಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದಾರೆ. ಭಯೋತ್ಪಾದಕರನ್ನು ಸೆರೆ ಹಿಡಿಯಲು ಭದ್ರತಾ ಪಡೆಗಳು ದಾಳಿಯಾದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಈ ದಾಳಿಯಲ್ಲಿ ಇಬ್ಬರು ಉಗ್ರರು ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಇದು 2024 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಅತಿ ದೊಡ್ಡ ದಾಳಿಯಾಗಿದೆ. ಕಳೆದ ವರ್ಷ ಪೂಂಚ್ ಮತ್ತು ರಜೌರಿಯಲ್ಲಿ ಹಲವು ದಾಳಿಗಳು ನಡೆದಿವೆ. ಅಂದಿನಿಂದ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಸದ್ಯ ಪೂಂಚ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.  

ಜೀ ನ್ಯೂಸ್ ವರದಿಗಾರರು ದಾಳಿಯ ಸ್ಥಳದ ಬಗ್ಗೆ ವರದಿ ಮಾಡಿದ್ದು, ಘಟನಾ ಸ್ಥಳದಲ್ಲಿ ಪಡೆದ ಫೋಟೋದಲ್ಲಿ ವಾಹನದ ವಿಂಡ್‌ಸ್ಕ್ರೀನ್‌ ಮೇಲಿನ ಗುಂಡಿನ ಗುರುತುಗಳನ್ನ ಕಾಣಬಹುದು.

ಇದನ್ನೂ ಓದಿ: ಕಲುಬರಗಿ-ಬೆಂಗಳೂರು ವಂದೇಭಾರತ್‌ ಎಕ್ಸ್‌ಪ್ರೆಸ್‌ ರೈಲು ಟಿಕೆಟ್‌ ದರ ಎಷ್ಟಿದೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News