ರಣ ಮಳೆಗೆ ತತ್ತರಿಸಿದ ಕರುನಾಡು... ಜನಶತಾಬ್ದಿ ರೈಲಿನ ಬೋಗಿಯಲ್ಲಿ ನೀರು ಸೋರಿಕೆ, ಜನಜೀವನ ಅಸ್ತವ್ಯಸ್ತ!

Karnataka Rain News: ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. 

Written by - Chetana Devarmani | Last Updated : May 18, 2024, 10:46 AM IST
  • ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ
  • ಅನೇಕ ಕಡೆಗಳಲ್ಲಿ ವರುಣನ ರುದ್ರನರ್ತನ
  • ಮಳೆ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ರಣ ಮಳೆಗೆ ತತ್ತರಿಸಿದ ಕರುನಾಡು... ಜನಶತಾಬ್ದಿ ರೈಲಿನ ಬೋಗಿಯಲ್ಲಿ ನೀರು ಸೋರಿಕೆ, ಜನಜೀವನ ಅಸ್ತವ್ಯಸ್ತ! title=

ಬೆಂಗಳೂರು: ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಚಿಕ್ಕಮಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ವರುಣನ ರುದ್ರನರ್ತನ ಮುಂದುವರೆದಿದೆ. ಮಳೆ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. 

ಇದನ್ನೂ ಓದಿ:  5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..! 

ರಸ್ತೆ, ಸೇತುವೆ ಮೇಲೆ ನದಿಯಂತೆ ಮಳೆ ನೀರು ಹರಿಯುತ್ತಿರುವ ದೃಶ್ಯ ಕಂಡು ಬಂದಿತು. ಸುತ್ತಮುತ್ತಲಿನ ತೋಟ, ಗದ್ದೆಗಳೆಲ್ಲ ಸಂಪೂರ್ಣ ಜಲಾವೃತಗೊಂಡಿವೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಅಪಾರ ಪ್ರಮಾಣದ ನೀರು ಹರಿದು ಬಂದಿವೆ. 

ಜನಶತಾಬ್ದಿ ರೈಲಿನ ಬೋಗಿ ಸೋರಿಕೆ : 

ಭಾರಿ ಮಳೆಗೆ ಬೆಂಗಳೂರು - ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿಯೊಂದರಲ್ಲಿ ನೀರು ಸೋರುತ್ತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ನೀರು ಸೋರುತ್ತಿರುವ ವಿಡಿಯೋ ಚಿತ್ರೀಕರಣ ಮಾಡಿ ಪ್ರಯಾಣಿಕರೊಬ್ಬರು ಹರಿಬಿಟ್ಟಿದ್ದಾರೆ. 

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ರೈಲಿನ D10 ಬೋಗಿಯಲ್ಲಿ ಮಳೆ ನೀರು ಸೋರುತ್ತಿತ್ತು. ಇದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸೀಟುಗಳಲ್ಲಿ ಕೂರಲಾಗದೆ ಪಕ್ಕದ ಬೋಗಿಗಳಿಗೆ ಹೋಗಿ ನಿಲ್ಲಲಾಗದೆ ರೈಲ್ವೆ ಇಲಾಖೆಗೆ ಪ್ರಯಾಣಿಕರು ಹಿಡಿ ಶಾಪ ಹಾಕಿದರು.

ಇದನ್ನೂ ಓದಿ:  ಮೇ 21ರವರೆಗೆ ರಾಜ್ಯದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News