POCO M6 Pro 5G: ಅತ್ಯಂತ ಕಡಿಮೆ ಬೆಲೆಗೆ ಅದ್ಭುತ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್!

POCO M6 Pro 5G Smartphone: ಪೊಕೊ M6 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇನ್ನು ಕ್ಯಾಮೆರಾ ಜೊತೆಗೆ PDAF ಮತ್ತು LED ಫ್ಲ್ಯಾಷ್ ಆಯ್ಕೆ ಕೂಡ ಲಭ್ಯವಿದೆ. ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. 

POCO M6 Pro 5G Smartphone: ಅಮೆಜಾನ್‌ ಗ್ರೇಟ್‌ ಸಮ್ಮರ್ ಸೇಲ್‌ನಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಸ್ಮಾರ್ಟ್‌ಫೋನ್‌ ಸೇರಿದಂತೆ ಹಲವಾರು ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ದೊರೆಯುತ್ತಿದೆ. ಮೇ 7 ರವರೆಗೂ ನಡೆಯಲಿರುವ ಈ ಸೇಲ್‌ನಲ್ಲಿ ಮೊಬೈಲ್‌ ಮೇಲೆ ಬಂಪರ್ ರಿಯಾಯಿತಿ ಲಭ್ಯವಿದೆ. ಈ ಪೈಕಿ ಪೊಕೊ M6 5G ಸ್ಮಾರ್ಟ್‌ಫೋನ್‌ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಅಮೆಜಾನ್‌ ಗ್ರೇಟ್‌ ಸಮ್ಮರ್ ಸೇಲ್‌ನಲ್ಲಿ ಪೊಕೊ M6 5G ಮೊಬೈಲ್‌ ಶೇ.29%ರಷ್ಟು ರಿಯಾಯಿತಿ ಲಭ್ಯವಿದೆ. ಈ ಫೋನಿನ 4GB RAM + 128GB ವೇರಿಯಂಟ್‌ ಕೇವಲ 9,249ರೂ.ಗೆ ಖರೀದಿಸಬಹುದು. ಬ್ಯಾಂಕ್‌ ಆಫರ್‌ ಪಡೆದುಕೊಂಡರೆ ನಿಮಗೆ ಮತ್ತಷ್ಟು ಡಿಸ್ಕೌಂಟ್‌ ಲಭಿಸಲಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಮೊಬೈಲ್‌ 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದೆ. 

2 /5

ಪೊಕೊ M6 5G ಮೊಬೈಲ್‌ 6.74 ಇಂಚಿನ HD ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಸಪೋರ್ಟ್ ಮಾಡಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್‌ ಒದಗಿಸಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಬೆಂಬಲ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಒಳಗೊಂಡಿದೆ.

3 /5

ಪೊಕೊ M6 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ ಪವರ್‌ ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಆಧಾರಿತ MIUI 14ನಲ್ಲಿ ಕೆಲಸ ಮಾಡುತ್ತದೆ. ಇದರ ಜೊತೆಗೆ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದಲ್ಲದೇ ಮೈಕ್ರೋ SD ಕಾರ್ಡ್ ಮೂಲಕ 1TBವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.

4 /5

ಪೊಕೊ M6 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇನ್ನು ಕ್ಯಾಮೆರಾ ಜೊತೆಗೆ PDAF ಮತ್ತು LED ಫ್ಲ್ಯಾಷ್ ಆಯ್ಕೆ ಕೂಡ ಲಭ್ಯವಿದೆ. ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಪೊಕೊ M6 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಹೊಂದಿದೆ.

5 /5

ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 5, ಡ್ಯುಯಲ್ ಸಿಮ್, 5G, ಬ್ಲೂಟೂತ್ 5.3 ಮತ್ತು GPS ಸಪೋರ್ಟ್‌ ಒಳಗೊಂಡಿದೆ. ಪೊಕೊ M6 5G ಫೋನ್‌ 4GB RAM + 128GB, 6GB RAM + 128GB ಹಾಗೂ 8GB RAM + 256GB ಸ್ಟೋರೇಜ್‌ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದು. ಈ ಮೊಬೈಲ್‌ ಓರಿಯನ್ ಬ್ಲೂ ಮತ್ತು ಗ್ಯಾಲಕ್ಟಿಕ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಸಿಗಲಿದೆ.