Glenn Maxwell: ನಿನ್ನೆ ನಡೆದ ಐತಿಹಾಸಿಕ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಏಕಾಂಗಿಯಾಗಿ ಅಫ್ಘಾನಿಸ್ತಾನ ತಂಡಕ್ಕೆ ಸೋಲುಣಿಸುವ ಮೂಲಕ ಇಡೀ ಪಂದ್ಯವನ್ನೇ ತಲೆಕೆಳಗಾಗಿಸಿದರು. ಇದು ಕ್ರಿಕೆಟ್ ಪ್ರಿಯರಿಗೆ 1983 ರ ಕಪಿಲ್ ದೇವ್ ಅವರ ಇನ್ನಿಂಗ್ಸ್ ಅನ್ನು ನೆನಪಿಸಿತು.
ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 291 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ ಗೆಲ್ಲಲು 292 ರನ್ ಗುರಿ ನೀಡಿತು. ಅಫ್ಘಾನಿಸ್ತಾನ ಪರ ಇಬ್ರಾಹಿಂ ಝದ್ರಾನ್ 129 ರನ್ಗಳ ಗರಿಷ್ಠ ಸ್ಕೋರ್ ಗಳಿಸಿದರೆ, ರಶೀದ್ ಖಾನ್ 18 ಎಸೆತಗಳಲ್ಲಿ 35 ರನ್ ಗಳಿಸಿದರು. ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾ ಪರ ಗರಿಷ್ಠ 2 ವಿಕೆಟ್ ಪಡೆದರು. ಆದರೆ, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಆಡಮ್ ಝಂಪಾ ತಲಾ 1 ವಿಕೆಟ್ ಪಡೆದರು. 292 ರನ್ಗಳ ಗುರಿಗೆ ಉತ್ತರವಾಗಿ ಆಸ್ಟ್ರೇಲಿಯಾ ತಂಡ 46.5 ಓವರ್ಗಳಲ್ಲಿ 293 ರನ್ ಗಳಿಸಿ 3 ವಿಕೆಟ್ಗಳಿಂದ ಜಯ ಸಾಧಿಸಿತು. ವಿಶೇಷವೇನೆಂದರೆ ಮ್ಯಾಕ್ಸ್ವೆಲ್ ಒಬ್ಬರೇ ಅಜೇಯ 201 ರನ್ ಗಳಿಸುವ
Glenn Maxwell: ಏಡನ್ ಮಾರ್ಕ್ರಾಮ್ ಅವರ ದಾಖಲೆಯನ್ನು ಬ್ರೇಕ್ ಮಾಡುವ ಮೂಲಕ ಮ್ಯಾಕ್ಸ್ವೆಲ್ ಈ ದೊಡ್ಡ ಸಾಧನೆ ಮಾಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪ್ರಸಕ್ತ ವಿಶ್ವಕಪ್’ನಲ್ಲಿ ಶ್ರೀಲಂಕಾ ವಿರುದ್ಧ ಮಾರ್ಕ್ರಾಮ್ 49 ಎಸೆತಗಳಲ್ಲಿ ಶತಕ ಗಳಿಸಿದ್ದರು.
IPL 2023: ರಾಜಸ್ಥಾನ್ ರಾಯಲ್ಸ್ ವಿರುದ್ಧ 44 ಎಸೆತಗಳಲ್ಲಿ 77 ರನ್ ಗಳಿಸಿದ ಮ್ಯಾಚ್ ವಿನ್ನಿಂಗ್ ಆಟಗಾರ ಬೇರಾರೂ ಅಲ್ಲ ಅವರೇ ಗ್ಲೆನ್ ಮ್ಯಾಕ್ಸ್ವೆಲ್. ಮ್ಯಾಕ್ಸ್ವೆಲ್ ತಮ್ಮ ಇನ್ನಿಂಗ್ಸ್’ನಲ್ಲಿ ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್’ಗಳನ್ನು ಬಾರಿಸಿದ್ದಲ್ಲದೆ, ಫಾಫ್ ಡು ಪ್ಲೆಸಿಸ್ (39 ಎಸೆತಗಳಲ್ಲಿ 62 ರನ್) ಅವರೊಂದಿಗೆ ಮೂರನೇ ವಿಕೆಟ್’ಗೆ 127 ರನ್ ಜೊತೆಯಾಟವನ್ನು ಹಂಚಿಕೊಳ್ಳುವ ಮೂಲಕ ಗೆಲುವಿಗೆ ಅಡಿಪಾಯ ಹಾಕಿದರು.
Indian Premier League 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ದಾಖಲಿಸಿದೆ.
RCB : ಈಗಾಗಲೇ ಆರ್'ಸಿಬಿಯ ಕ್ಯಾಪ್ಟನ್ ಫ್ಯಾಪ ಡುಪ್ಲೆಸಿಸ್ ತಂಡ ಸೇರಿಕೊಂಡು, ಅಭ್ಯಾಸ ಆರಂಭಿಸಿದ್ದಾರೆ. ಜೊತೆಗೆ ದಿನೇಶ್ ಕಾರ್ತಿಕ್ ಕೂಡ ಅಭ್ಯಾಸದಲ್ಲಿ ತೊಡಗಿದ್ದಾರೆ. ಇನ್ನೇನು ನಾಳೆ ತಂಡದ ಎಲ್ಲಾ ಆಟಗಾರರು ನಾಳೆ ನಡೆಯುವ ಆರ್'ಸಿಬಿ ಅನ್ ಬಾಕ್ಸಿಂಗ್ ಇವೆಂಟ್ ನಲ್ಲಿ ಭಾಗವಹಿಸಲಿದ್ದಾರೆ.
IPL 2023 Trophy: ಐಪಿಎಲ್ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಬಾಕಿ ಇವೆ. ಸುಮಾರು ಎರಡು ತಿಂಗಳ ಕಾಲ ನಡೆಯುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಲೀಗ್ ನಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದೇ ರೋಚಕತೆ ಕಾಣಲಿದೆ. ಐಪಿಎಲ್ ಪ್ರಾರಂಭವಾದಾಗಿನಿಂದ ಟ್ರೋಫಿ ಎತ್ತಿಹಿಡಿಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಶತಪ್ರಯತ್ನ ಮಾಡುತ್ತಿದೆ. ಆದರೆ ಅದು ಸಾಧ್ಯವಾಗಿಲ್ಲ. ಇನ್ನು ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಇದೀಗ 2023ರ ಐಪಿಎಲ್ ಟ್ರೋಫಿಯನ್ನು ಆರ್ ಸಿ ಬಿಗೆ ತಂದುಕೊಡುತ್ತೇವೆ ಅಂತಾ ಈ 5 ಆಟಗಾರ ಪಣತೊಟ್ಟಿದ್ದಾರೆ.
ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್ಮನ್ ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಗ್ಲೆನ್ ಮ್ಯಾಕ್ಸ್ವೆಲ್ ಹೇಳಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಪ್ರಕಾರ, ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಖರೀದಿಸಲು ಕಡಿಮೆ ಹಣವಿದೆ ಎಂದು ಹೇಳಲಾಗುತ್ತಿದೆ.
IPL 2022 ರಲ್ಲಿ ಪ್ರತಿ ವರ್ಷದಂತೆ, ಈ ಬಾರಿಯೂ ಹೆಚ್ಚಿನ ಕ್ಯಾಚ್ಗಳು ಕಂಡುಬಂದಿವೆ. ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ಎವಿನ್ ಲೂಯಿಸ್ ಹಿಡಿದ ಉತ್ತಮ ಕ್ಯಾಚ್ ಈ ಸೀಸನ್ನ ಅತ್ಯುತ್ತಮ ಕ್ಯಾಚ್ ಎಂದು ಪರಿಗಣಿಸಲ್ಪಟ್ಟಿದೆ. ಆದರೆ ಇದನ್ನು ಹೊರತುಪಡಿಸಿ, ಅನೇಕ ಅದ್ಭುತ ಕ್ಯಾಚ್ಗಳು ಈ ಸೀಸನ್ನಲ್ಲಿ ಕಂಡುಬಂದವು.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಬುಧುವಾರದಂದು ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸೆಣಸಲಿದೆ.
IPL 2022: ಈ ಬಾರಿ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಆರ್ಸಿಬಿ ಬಲಿಷ್ಠ ಪ್ಲೇಯಿಂಗ್ XI (IPL 2022 RCB Team) ಕಟ್ಟಲು ಸಿದ್ಧವಾಗಿದೆ. ಮೊದಲಿಗೆ ಆರ್ ಸಿಬಿ ತಂಡಕ್ಕೆ ನಾಯಕನ ಅಗತ್ಯವಿದೆ. ಸದ್ಯ ಆರ್ಸಿಬಿಯಲ್ಲಿ ಒಟ್ಟು 21 ಆಟಗಾರರಿದ್ದಾರೆ.
ಕಳೆದ ವರ್ಷ ಮಾರ್ಚ್ನಲ್ಲಿ ಮ್ಯಾಕ್ಸ್ವೆಲ್ ಭಾರತೀಯ ಸಂಪ್ರದಾಯದ ಪ್ರಕಾರ ವಿನಿ ರಾಮನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರಿಬ್ಬರ ಫೋಟೋಗಳು ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದ್ದವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.