ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌ ಜತೆಗೆ ಪೋಸ್ಟ್ ಪೇಯ್ಡ್ ಪ್ಲಾನ್ 888 ಘೋಷಣೆ

Newdelhi :  ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ರಿಲಯನ್ಸ್ ಜಿಯೋದಿಂದ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದೆ.

Written by - Zee Kannada News Desk | Last Updated : May 13, 2024, 10:17 PM IST
  • ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳಬೇಕೆಂದರೆ, 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆ ಪ್ರತಿಯೊಬ್ಬರಿಗೂ ಎಲ್ಲರಿಗೂ ದೊರೆಯುತ್ತದೆ
  • ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ.
  • ಜಿಯೋ ಡಿಡಿಡಿ ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ.
ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌ ಜತೆಗೆ ಪೋಸ್ಟ್ ಪೇಯ್ಡ್ ಪ್ಲಾನ್ 888 ಘೋಷಣೆ title=

Postpaid plan : ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ರಿಲಯನ್ಸ್ ಜಿಯೋದಿಂದ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದೆ. ಯಾರು ಒಟಿಟಿ ಪ್ಲಾಟ್ ಫಾರ್ಮ್ ಗಳನ್ನು ಅತಿಹೆಚ್ಚು ಬಳಕೆ ಮಾಡುತ್ತೀರಿ, ಇಷ್ಟ ಪಡುತ್ತೀರಿ ಅಂಥವರಿಗೆ ಹೇಳಿಮಾಡಿಸಿದಂಥ ಯೋಜನೆ ಇದಾಗಿದ್ದು, ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ.

ಇದನ್ನು ಓದಿ : Jaipur : ಜೈಪುರದಲ್ಲಿ 50ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ 

ಇದರ ಅಡಿಯಲ್ಲಿ ಗ್ರಾಹಕರು ಹದಿನೈದು ಪ್ರೀಮಿಯಂ ಒಟಿಟಿ ಅಪ್ಲಿಕೇಷನ್ ಗಳನ್ನು ಪಡೆಯುತ್ತಾರೆ. ಇದರ ಜತೆಗೆ ಅನಿಯಮಿತ (ಅನ್ ಲಿಮಿಟೆಡ್) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್ ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದು. ಅಂದ ಹಾಗೆ ಈ ಪ್ಲಾನ್ ಗೆ ತಿಂಗಳಿಗೆ 888 ರೂಪಾಯಿ ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ.

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು  30 ಎಂಬಿಪಿಎಸ್ (Mbps) ವೇಗವನ್ನು ಪಡೆಯುತ್ತಾರೆ. ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್ ಗಳು ದೊರೆಯುತ್ತವೆ. ಈ ಅಪ್ಲಿಕೇಷನ್ ನ ಸಬ್ ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯಮ್ಮು ಹೊಸ ಚಂದಾದಾರಷ್ಟೇ ಅಲ್ಲ, 10  ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದು.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳಬೇಕೆಂದರೆ, 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆ ಪ್ರತಿಯೊಬ್ಬರಿಗೂ ಎಲ್ಲರಿಗೂ ದೊರೆಯುತ್ತದೆ. ಇನ್ನು ಸದ್ಯಕ್ಕೆ ಪ್ರಿಪೇಯ್ಡ್  ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್ ಗ್ರೇಡ್ ಮಾಡಬಹುದು. 

ಇದನ್ನು ಓದಿ : ತಲೈವಾ 'ಕೂಲಿ' ಸಿನಿಮಾ ನಿರ್ದೇಶನಕ್ಕಾಗಿ ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ!? 

ಇನ್ನೂ ಒಂದು ವಿಚಾರ ನಿಮಗೆ ಗೊತ್ತಿರಲಿ. ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್ ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ ಐವತ್ತು ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News