ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

DCM DK Shivakumar: ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 

Written by - Chetana Devarmani | Last Updated : Apr 29, 2024, 09:23 AM IST
  • ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ
  • "ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ"
  • ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ title=

ಬೆಂಗಳೂರು: ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ. 

ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ.  ಶ್ರೀನಿವಾಸ್  ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು.

ಇದನ್ನೂ ಓದಿ: ದಲಿತ ನಾಯಕ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ 

ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ.

ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ" ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ.. ಕೈಗೆ ಮತ್ತೂ ಚೊಂಬೇ ಗತಿ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ

5 ದಶಕಗಳ ಸುದೀರ್ಘ ಸಕ್ರಿಯ ರಾಜಕಾರಣದಲ್ಲಿದ್ದ, ಮಾರ್ಚ್ ನಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ವಿ.ಶ್ರೀನಿವಾಸಪ್ರಸಾದ್ ವಯೋಸಹಜ ಖಾಯಿಲೆಗಳಿಂದಾಗಿ ಸೋಮವಾರ ಮುಂಜಾನೆ 1.30  ರಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕಾಲು ನೋವು, ಮೂತ್ರಪಿಂಡ‌ ಸೋಂಕು ಸೇರಿದಂತೆ ಇತರೆ ರೋಗ ಸಂಬಂಧದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.‌ ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News