ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗಲಿದೆ ಇಷ್ಟು ಬಹುಮಾನ..?!

World Test Championship : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ.

Written by - VISHWANATH HARIHARA | Edited by - Krishna N K | Last Updated : May 26, 2023, 08:29 PM IST
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ.
  • ಈ ಚಾಂಪಿಯನ್​ಶಿಪ್​ನಲ್ಲಿ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ.
  • ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗಲಿದೆ ಇಷ್ಟು ಬಹುಮಾನ..?! title=

ICC World Test Championship : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಸದ್ಯ ಈ ಚಾಂಪಿಯನ್​ಶಿಪ್​ನಲ್ಲಿ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನ ಸಿಗಲಿದೆ.

ಸೋತು ರನ್ನರ್​ ಅಪ್ ಆಗುವ ತಂಡಕ್ಕೆ ರೂ. 6.61 ಕೋಟಿ ಬಹುಮಾನ ದೊರೆಯಲಿದೆ. ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾಕ್ಕೆ 3.71 ಕೋಟಿ ರೂ. ಬಹುಮಾನ ದೊರೆಯಲಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಇಂಗ್ಲೆಂಡ್‌ಗೆ 2.89 ಕೋಟಿ,  5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಸಿಗಲಿದೆ. ಇನ್ನೂ ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಂಡಗಳಿಗೆ ತಲಾ 84 ಲಕ್ಷ ರೂ. ಬಹುಮಾನ ದೊರೆಯಲಿದೆ.

ಇದನ್ನೂ ಓದಿ: Virat Kohli : ಇನ್‌ಸ್ಟಾಗ್ರಾಮ್‌ನಲ್ಲಿ 250 ಮಿಲಿಯನ್‌ ಫಾಲೋವರ್ಸ್‌;ದಾಖಲೆ ಬರೆದ ವಿಕೆ

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹುಲ್‌ ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ತೆರಳಿದ್ದಾರೆ. ಇಂದು ಟೀಂ ಇಂಡಿಯಾದ ರನ್‌ ಮೆಷಿನ್‌ ಕಿಂಗ್‌ ಕೊಹ್ಲಿ ಸಹ ತಂಡವನ್ನು ಸೇರಿಕೊಂಡಿದ್ದಾರೆ. ಐಪಿಎಲ್‌ ಮುಗಿದ ಮೇಲೆ ನಾಯಕ ರೋಹಿತ್‌ ಶರ್ಮ ಹಾಗೂ ತಂಡದಲ್ಲಿ ಸ್ಥಾನ ಪಡೆದಿರುವ ಇತರ ಆಟಗಾರರು ಇಂಗ್ಲೆಂಡ್‌ಗೆ ಪ್ರಯಾಣ ಬೆಳಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News