ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಕಾಂಗ್ರೆಸ್ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್ಗೌಡ ಅವರು ನಮ್ಮ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಉತ್ತಮ ಆರೋಗ್ಯ ನಾವು ಸೇವಿಸುವ ಆಹಾರದ ಮೇಲೆ ನಿಂತಿದ್ದು, ಈ ನಿಟ್ಟಿನಲ್ಲಿ ಶಾಲಾ ಮಕ್ಕಳ ಹಂತದಲ್ಲಿಯೇ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
DK Brothers vs HD Family: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಬ್ರದರ್ಸ್ Vs ದೇವೇಗೌಡರ ಕುಟುಂಬ ಎಂಬ ವಾತಾವರಣ ಇದ್ದು ಹಳೆ ಮೈಸೂರು ರಾಜಕೀಯ ಗಮನ ಸೆಳೆದಿತ್ತು. ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ರಾಜೀನಾಮೆ ಖಚಿತ ಆಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಬಗ್ಗೆ ದೊಡ್ಡ ಚರ್ಚೆ ಪ್ರಾರಂಭ ಆಗಿದೆ.
Lok Sabha Election Result 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 242 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಸರಳ ಬಹುಮತ ಸಿಕ್ಕಿಲ್ಲ. ಹೀಗಾಗಿ ಮಿತ್ರಪಕ್ಷಗಳ ಜೊತೆಗೆ ಮೈತ್ರಿ ನಿಭಾಯಿಸುವುದು ಕಷ್ಟವಾಗಲಿದೆ. ವಿಶೇಷವಾಗಿ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡು ಜೊತೆಗೆ ಹೊಂದಾಣಿಕೆ ಕಷ್ಟವೆಂದು ಹೇಳಲಾಗುತ್ತಿದೆ.
"ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
'ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್ಡಿಐ) ಕಳೆದ ಎರಡು - ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.
ಸಿಐಡಿ ತನಿಖೆ ಎನ್ನುವುದು ಕಾಟಾಚಾರದ ತನಿಖೆ. ಇಂತಹ ತನಿಖೆ ಮಾಡಲು ಕುಟುಂಬದವರು ಅಥವಾ ವಿರೋಧ ಪಕ್ಷದವರು ಕೇಳಬೇಕು. ಆದರೆ ಯಾರೂ ಕೇಳದೆ ಸರ್ಕಾರವೇ ಪ್ರಕರಣ ಮುಚ್ಚಿಹಾಕಲು ತನಿಖೆ ಮಾಡಿಸುತ್ತಿದೆ. ದಲಿತರ 187 ಕೋಟಿ ರೂ. ಹಣ ಗುಳುಂ ಆದರೂ ಒಬ್ಬರನ್ನೂ ಬಂಧಿಸಿಲ್ಲ. ಅದೇ ಸಣ್ಣ ವಿಚಾರಗಳಿಗೆ ಮನೆಗೆ ಹೋಗಿ ಬಂಧಿಸುತ್ತಾರೆ. ಆರೋಪಿಗಳನ್ನು ಬಂಧಿಸಿದರೆ ಮುಖ್ಯಮಂತ್ರಿ ಮೇಲೆಯೇ ಆರೋಪ ಬರುತ್ತದೆ ಎಂಬ ಭಯವಿದೆ. ಅದಕ್ಕಾಗಿ ಸರಿಯಾಗಿ ತನಿಖೆ ಮಾಡಿಸುತ್ತಿಲ್ಲ ಎಂದು ದೂರಿದರು.
ಮಾಟಮಂತ್ರದ ಯಾಗದಲ್ಲಿ ಕೆಲವು ಅಘೋರಿಗಳು ಭಾಗಿಯಾದ್ದಾರೆ, ಈ ಮಾಟಮಂತ್ರಕ್ಕಾಗಿ 21 ಕೆಂಪು ಮೇಕೆ, ಮೂರು ಎಮ್ಮೆ, 21 ಕಪ್ಪು ಕುರಿ, ಐದು ಹಂದಿಗಳನ್ನು ಕರೆತಂದಿರುವ ಮಾಹಿತಿ ಬಂದಿದ್ದು, ಇವುಗಳನ್ನು ಬಲಿ ನೀಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಮೊನ್ನೆಯಷ್ಟೇ ದೇವೇಗೌಡ್ರು ತಮ್ಮ ಮೊಮ್ಮಗನಿಗೆ ಪತ್ರ ಬರೆದು ವಾರ್ನ್ ಮಾಡಿದ್ರು.ಈ ನಡುವೆ ನಾಳೆಯೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಅವಧಿ ಲಾಸ್ಟ್ ದಿನ. ಈ ಮಧ್ಯೆ ವಿಡಿಯೋ ಬಿಟ್ಟು ಬೆಂಗಳೂರಿಗೆ ಬರ್ತೀನಿ ಎಂದಿದ್ದ ಪ್ರಜ್ವಲ್ ರೇವಣ್ಣ ಬರೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ.
Bangalore : ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Phone tapping: ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
“ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.