IPL: ಇಂದು ಚೆನ್ನೈ vs ಹೈದರಾಬಾದ್ ಬಿಗ್ ಫೈಟ್: ಉಭಯ ತಂಡಗಳ ಕದನದಲ್ಲಿ ಯಾರ ಬಲ ಹೇಗೇಗಿದೆ? ಇಲ್ಲಿದೆ ವರದಿ

CSK vs SRH: 27 ಮಾರ್ಚ್ 2024 ರಂದು ಇಲ್ಲಿ ನಡೆದ ಕೊನೆಯ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, 277 ರನ್‌’ಗಳ ಬೃಹತ್ ಸ್ಕೋರ್ ಕಲೆಹಾಕಿತ್ತು. ಆದರೆ ಈ ಬಾರಿ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಕಣಕ್ಕಿಳಿಯಲಿದ್ದು, ಇದುವರೆಗಿನ ಪ್ರದರ್ಶನವು ತುಂಬಾ ಕಳಪೆಯಾಗಿದೆ.

Written by - Bhavishya Shetty | Last Updated : Apr 5, 2024, 02:31 PM IST
    • ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ
    • ಹೈದರಾಬಾದ್‌’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಿಗ್ ಫೈಟ್
    • ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಅಪಾಯಕಾರಿ ಬೌಲರ್‌’ಗಳ ಸೈನ್ಯವನ್ನು ಹೊಂದಿದೆ
IPL: ಇಂದು ಚೆನ್ನೈ vs ಹೈದರಾಬಾದ್ ಬಿಗ್ ಫೈಟ್: ಉಭಯ ತಂಡಗಳ ಕದನದಲ್ಲಿ ಯಾರ ಬಲ ಹೇಗೇಗಿದೆ? ಇಲ್ಲಿದೆ ವರದಿ title=
CSK vs SRH

CSK vs SRH: ಐಪಿಎಲ್ 2024 ರ 18ನೇ ಪಂದ್ಯವು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ರಾತ್ರಿ 7.30 ಕ್ಕೆ ಹೈದರಾಬಾದ್‌’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

27 ಮಾರ್ಚ್ 2024 ರಂದು ಇಲ್ಲಿ ನಡೆದ ಕೊನೆಯ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, 277 ರನ್‌’ಗಳ ಬೃಹತ್ ಸ್ಕೋರ್ ಕಲೆಹಾಕಿತ್ತು. ಆದರೆ ಈ ಬಾರಿ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಕಣಕ್ಕಿಳಿಯಲಿದ್ದು, ಇದುವರೆಗಿನ ಪ್ರದರ್ಶನವು ತುಂಬಾ ಕಳಪೆಯಾಗಿದೆ.

ಇದನ್ನೂ ಓದಿ: Hair Care Tips: ಕೂದಲು ಹಾಗೂ ತ್ವಚೆಯ ಆರೋಗ್ಯ ರಕ್ಷಣೆಗೆ ಈ ತೊಗಟೆ ಒಂದು ರಾಮಬಾಣ ಮನೆಮದ್ದು!

ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಅಪಾಯಕಾರಿ ಬೌಲರ್‌’ಗಳ ಸೈನ್ಯವನ್ನು ಹೊಂದಿದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡೂ ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋಲುಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ಮೂರು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. SRH ಮೂರು ಪಂದ್ಯಗಳಿಂದ ಕೇವಲ ಒಂದು ಗೆಲುವಿನೊಂದಿಗೆ ಏಳನೇ ಸ್ಥಾನದಲ್ಲಿದೆ.

ಯಾವ ತಂಡ ಯಾರಿಗಿಂತ ಶ್ರೇಷ್ಠ?

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌’ನಲ್ಲಿ ಇದುವರೆಗೆ 20 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ ಮೇಲುಗೈ ಸಾಧಿಸಿದೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳನ್ನು ಗೆದ್ದಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ಕೇವಲ 5 ಪಂದ್ಯಗಳನ್ನು ಗೆದ್ದಿದೆ. ಇನ್ ಫಾರ್ಮ್ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಇಲ್ಲದೆ, ಚೆನ್ನೈ ಸೂಪರ್ ಕಿಂಗ್ಸ್ ಇಂದು ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

ಇದನ್ನೂ ಓದಿ:  White Hair Remedy: ಅಪ್ಪಿತಪ್ಪಿಯೂ ಬಿಳಿ ಕೂದಲನ್ನು ಕೀಳಬೇಡಿ.. ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ಶಾಶ್ವತವಾಗಿ ಕಪ್ಪಾಗುತ್ತೆ!!

ಮುಸ್ತಾಫಿಜುರ್ ಸ್ಥಾನಕ್ಕೆ ಮುಖೇಶ್ ಚೌಧರಿ ಆಯ್ಕೆ!

ಮುಸ್ತಾಫಿಜುರ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗಾಗಿ ವೀಸಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬಾಂಗ್ಲಾದೇಶಕ್ಕೆ ಮರಳಿದ್ದಾರೆ. ಇಲ್ಲಿಯವರೆಗೆ ಮುಸ್ತಾಫಿಜುರ್ ಮತ್ತು ಮತಿಶಾ ಪತಿರಾನ ಜೋಡಿ ಸಿಎಸ್‌’ಕೆ ಪರ ಉತ್ತಮ ಪ್ರದರ್ಶನ ನೀಡುತ್ತಿತ್ತು. ಇದೀಗ ಮುಸ್ತಫಿಜುರ್ ಬದಲಿಗೆ ಮುಖೇಶ್ ಚೌಧರಿ ಆಯ್ಕೆಯಾಗಬಹುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News