ಇಂದು ಬೆಳಗ್ಗೆ ಕೇಂದ್ರ ಮಾನವ ಹಕ್ಕುಗಳ ಆಯೋಗದ ತಂಡ ಹೈದ್ರಾಬಾದ್ ತಲುಪಿದ್ದು, ಮೊದಲಿಗೆ ಎನ್ಕೌಂಟರ್ ನಡೆಸಲಾಗಿರುವ ಸ್ಥಳಕ್ಕೆ ಭೇಟಿ ನೀಡಲಿರುವ ತಂಡ, ಬಳಿಕ ಮೆಹಬೂಬ್ ನಗರ್ ತಲುಪಲಿದೆ. ಇಲ್ಲಿ ನಾಲ್ವರು ಆರೋಪಿಗಳ ಮೃತದೇಹ ಇಡಲಾಗಿದೆ.
ಹೈದರಾಬಾದ್ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಶಾದ್ನಗರದ ಚರ್ನಪಲ್ಲಿ ಬಳಿ ಪೊಲೀಸರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡ ಆರೋಪಿಗಳು ನಂತರ ಪರಾರಿಯಾಗಲು ಯತ್ನಿಸಿದ್ದರು ಎನ್ನಲಾಗಿದೆ.
ತೆಲಂಗಾಣದಲ್ಲಿ ನಡೆದಿರುವ ಇಂತಹ ಎರಡನೇ ಎನ್ಕೌಂಟರ್ ಇದಾಗಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕರು ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಎನ್ಕೌಂಟರ್ ಮಾಡಲಾಗಿದೆ.
ಹೈದರಾಬಾದ್ನ ಮಹಿಳಾ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ಎನ್ಕೌಂಟರ್ ನಡೆಸುವ ಮೂಲಕ ಹತ್ಯೆಗೈದಿದ್ದಾರೆ.
ಹೈದರಾಬಾದ್ನ ಹೊರವಲಯದಲ್ಲಿರುವ ಶಾದ್ನಗರದ ಬಳಿ ನವೆಂಬರ್ 27 ರ ರಾತ್ರಿ ಸಾಮೂಹಿಕ ಅತ್ಯಾಚಾರವೆಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ್ದರು. ಇಂದು ಮುಂಜಾನೆ ಅದೇ ಸ್ಥಳದಲ್ಲಿ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಅಕ್ಟೋಬರ್ 5 ರಂದು ಕೆಸಿಆರ್ ಸರ್ಕಾರದ ನಿರ್ಧಾರ ವಿರೋಧಿಸಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್ಆರ್ಟಿಸಿ) ನೌಕರರು ಕರೆ ನೀಡಿದ ಮುಷ್ಕರದಿಂದಾಗಿ ಈಗ ಹೈದರಾಬಾದ್ ಮತ್ತು ಇತರ 32 ಜಿಲ್ಲೆಗಳಲ್ಲಿ ದೈನಂದಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.