Goa Politics : ಕಾಂಗ್ರೆಸ್ ಬಿಗ್ ಶಾಕ್ : ಗೋವಾದ 8 ಜನ ಕೈ ಶಾಸಕರು ಬಿಜೆಪಿ ಸೇರ್ಪಡೆ

ಈ 8 ಕಾಂಗ್ರೆಸ್ ಶಾಸಕರು ಇಂದು ಗೋವಾ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.  

Written by - Channabasava A Kashinakunti | Last Updated : Sep 14, 2022, 12:48 PM IST
  • ಗೋವಾದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ
  • ಎಂಟು ಶಾಸಕರು ಇಂದು ಆಡಳಿತಾರೂಢ ಬಿಜೆಪಿ ಸೇರ್ಪಡೆ
  • ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.
Goa Politics : ಕಾಂಗ್ರೆಸ್ ಬಿಗ್ ಶಾಕ್ : ಗೋವಾದ 8 ಜನ ಕೈ ಶಾಸಕರು ಬಿಜೆಪಿ ಸೇರ್ಪಡೆ title=

Goa Politics : ಗೋವಾದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ, ಅದರ ಎಂಟು ಶಾಸಕರು ಇಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ದಿಗಂಬರ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಕೇಸರಿ ಪಾಳಯಕ್ಕೆ ಸೇರ್ಪಡೆಗೊಂಡ ಎಂಟು ಕಾಂಗ್ರೆಸ್ ಶಾಸಕರು.

ಈ 8 ಕಾಂಗ್ರೆಸ್ ಶಾಸಕರು ಇಂದು ಗೋವಾ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ.

ಇದನ್ನೂ ಓದಿ : Jammu and Kashmir: ಆಳವಾದ ಕಮರಿಗೆ ಬಸ್ ಬಿದ್ದು 9 ಮಂದಿ ಸ್ಥಳದಲ್ಲೇ ದುರ್ಮರಣ!

ಈ ಬಗ್ಗೆ  ಪಕ್ಷ ಬದಲಾಯಿಸಿದ ಮೈಕೆಲ್ ಲೋಬೋ ಮಾತನಾಡಿ "ಪ್ರಧಾನಿ (ನರೇಂದ್ರ) ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈಗಳನ್ನು ಬಲಪಡಿಸಲು ನಾವು ಬಿಜೆಪಿಗೆ ಸೇರಿದ್ದೇವೆ, ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ" ಎಂದು ಹೇಳಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ ಈಗ ಮೂವರು ಶಾಸಕರ ಬಲವನ್ನು ಹೊಂದಿದ್ದರೆ, ಬಿಜೆಪಿಯ ಬಲ 20 ರಿಂದ 28 ಕ್ಕೆ ಏರಿದೆ.ಈ ಹಿಂದೆ 2019 ರಲ್ಲಿ 10 ಕಾಂಗ್ರೆಸ್ ಶಾಸಕರು ಕೇಸರಿ ಪಾಳಯಕ್ಕೆ ಸೇರ್ಪಡೆಗೊಂಡಿದ್ದರು.

ಇದನ್ನೂ ಓದಿ : Good News: ಅಗತ್ಯ ಔಷಧಗಳ ದರ ಇಳಿಕೆ ಮಾಡಿದ ಕೇಂದ್ರ ಸರ್ಕಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News