ಹರಿಯಾಣ-ಮಹಾರಾಷ್ಟ್ರದಲ್ಲಿ ಮತದಾನ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮೋದಿ ಮನವಿ

'ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ನಾನು ಭಾವಿಸುತ್ತೇನೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Last Updated : Oct 21, 2019, 08:51 AM IST
ಹರಿಯಾಣ-ಮಹಾರಾಷ್ಟ್ರದಲ್ಲಿ ಮತದಾನ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮೋದಿ ಮನವಿ title=
File image

ನವದೆಹಲಿ: ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗೆ ಸೋಮವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಇದರೊಂದಿಗೆ ದೇಶದ 18 ರಾಜ್ಯಗಳಲ್ಲಿ 51 ವಿಧಾನಸಭಾ ಸ್ಥಾನಗಳು ಮತ್ತು ಎರಡು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಏತನ್ಮಧ್ಯೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮತದಾರರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ಮರಾಠಿ ಭಾಷೆಯಲ್ಲಿ ಟ್ವೀಟ್ ಮಾಡಿ ಮತದಾರರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.

ಪ್ರಜಾಪ್ರಭುತ್ವದ ಈ ಉತ್ಸವದಲ್ಲಿ ಮತದಾರರು ಹುರುಪಿನಿಂದ ಭಾಗವಹಿಸುವಂತೆ ನಾನು ಮನವಿ ಮಾಡುತ್ತೇನೆ. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ 288 ಸ್ಥಾನಗಳಿಗೆ ಮತ್ತು ಹರಿಯಾಣದಲ್ಲಿ 90 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಹಾಗೂ ಕಾಂಗ್ರೆಸ್-ಎನ್‌ಸಿಪಿ ಮೈತ್ರಿ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಹೊಸ ಪಕ್ಷ 'ಜಜ್ಪಾ'ದೊಂದಿಗೆ ಸ್ಪರ್ಧಿಸುತ್ತಿದೆ.

ಮಹಾರಾಷ್ಟ್ರದಲ್ಲಿ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪಡೆಗಳ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಹರಿಯಾಣದಲ್ಲಿ 75,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಹಾರಾಷ್ಟ್ರದಲ್ಲಿ 235 ಮಹಿಳೆಯರು ಸೇರಿದಂತೆ 3,237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನಕ್ಕಾಗಿ 96,661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಆರೂವರೆ ಲಕ್ಷ ನೌಕರರನ್ನು ನಿಯೋಜಿಸಲಾಗಿದೆ. ಹರಿಯಾಣದಲ್ಲಿ 85 ಲಕ್ಷ ಮಹಿಳೆಯರು ಮತ್ತು 252 ತೃತೀಯ ಲಿಂಗಿ ಮತದಾರರು ಸೇರಿದಂತೆ 1.83 ಕೋಟಿ ಮತದಾರರಿದ್ದಾರೆ. ರಾಜ್ಯದಲ್ಲಿ 19,578 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
 

Trending News