ಜನಪ್ರತಿನಿಧಿಗಳಿಂದ ಹಕ್ಕು ಚಲಾವಣೆ: ತಮ್ಮನ ಜೊತೆ ನಂಜನಗೂಡು ಶಾಸಕ ಮತದಾನ

Lok Sabha Election 2024 Phase 2 Polling: ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಚುನಾವಣೆಯಲ್ಲಿ ಜನಪ್ರತಿನಿಧಿಗಳು ಕೂಡ ಉತ್ಸಾಹದಿಂದ ಮತದಾನ ನಡೆಸಿದ್ದಾರೆ. ಚಾಮರಾಜನಗರ ಶಾಸಕ ಸಿ‌.ಪುಟ್ಟರಂಗಶೆಟ್ಟಿ ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ಹಕ್ಕು ಚಲಾಯಿಸಿದರು.

Written by - Yashaswini V | Last Updated : Apr 26, 2024, 10:59 AM IST
  • 2013 ರಲ್ಲಿ ಮೊದಲ ಮತದಾನ ಮಾಡಿದ್ದ ದರ್ಶನ್ ಧ್ರುವನಾರಾಯಣ
  • ಈಗ ಐದನೇ ಬಾರಿ ತಮ್ಮ ಹಕ್ಕು ಚಲಾಯಿಸುತ್ತಿರುವ ದರ್ಶನ್ ಧ್ರುವನಾರಾಯಣ್
  • ಕಾಂಗ್ರೆಸ್ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ದರ್ಶನ್
ಜನಪ್ರತಿನಿಧಿಗಳಿಂದ ಹಕ್ಕು ಚಲಾವಣೆ: ತಮ್ಮನ ಜೊತೆ ನಂಜನಗೂಡು ಶಾಸಕ ಮತದಾನ  title=

Lok Sabha Election 2024 Phase 2 Polling: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಬೆಳಗ್ಗೆ 9 ರ ತನಕ ಶೇ.7 ರಷ್ಟು ಮತದಾನವಾಗಿತ್ತು.

ಪ್ರಜಾಪ್ರಭುತ್ವದ (Democracy) ದೊಡ್ಡ ಹಬ್ಬವಾದ ಚುನಾವಣೆಯಲ್ಲಿ ಜನಪ್ರತಿನಿಧಿಗಳು ಕೂಡ ಉತ್ಸಾಹದಿಂದ ಮತದಾನ ನಡೆಸಿದ್ದಾರೆ. ಚಾಮರಾಜನಗರ ಶಾಸಕ ಸಿ‌.ಪುಟ್ಟರಂಗಶೆಟ್ಟಿ (MLA C. Puttarangashetty) ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ಹಕ್ಕು ಚಲಾಯಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌ ಮಹೇಶ್ (BJP State Vice President N Mahesh) ಕೊಳ್ಳೇಗಾಲದ ಶಂಕರಪುರ ಬಡಾವಣೆಯಲ್ಲಿ ಮತದಾನ ಮಾಡಿದರೆ, ಹನೂರು ಮಾಜಿ ಶಾಸಕ ಆರ್.ನರೇಂದ್ರ ದೊಡ್ಡಿಂದುವಾಡಿ ಗ್ರಾಮದಲ್ಲಿ ಮತದಾನ ಮಾಡಿದ್ದಾರೆ.

ಇದನ್ನೂ ಓದಿ- Lok Sabha Election 2024: ಮತದಾರರನ್ನು ಕೈ ಬೀಸಿ ಕರೆಯುವ ವಿಶೇಷ ಮತಗಟ್ಟೆಗಳು...!

ತಮ್ಮನ ಜೊತೆ ದರ್ಶನ್ ಮತದಾನ: 
ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ (MLA Darshan Dhruvanarayan) ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ತಮ್ಮ ಧೀರನ್ ಧ್ರುವನಾರಾಯಣ ಜೊತೆ ಮತದಾನ ಮಾಡಿದರು.

2013 ರಲ್ಲಿ ಮೊದಲ ಮತದಾನ ಮಾಡಿದ್ದ ದರ್ಶನ್ ಧ್ರುವನಾರಾಯಣ ಈಗ ಐದನೇ ಬಾರಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮವರೊಂದಿಗೆ ಅವರು ಮಾತನಾಡಿ, ಕಾಂಗ್ರೆಸ್ ಲೋಕಸಭಾ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ- Lok Sabha Election 2024: "ರಾಜ್ಯಕ್ಕೆ ಆದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ"

ಗ್ಯಾರಂಟಿ ಯೋಜನೆಗಳನ್ನು (Guarantee plans) ಮನೆಮನೆಗೆ ತಲುಪಿಸಿದ್ದು ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಲೀಡ್ ಬರಲಿದೆ, ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಹಾಲಹಳ್ಳಿಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಆಲೂರು ಗ್ರಾಮದಲ್ಲಿ ಮತ ಚಲಾವಣೆ ಮಾಡಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

  

Trending News