Lok Sabha Election 2024: ಚಾಮರಾಜನಗರದ ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ಹಣ ಪೋಲೀಸರ ವಶಕ್ಕೆ 

Lok Sabha Election 2024: ಕರ್ನಾಟಕ ಹಾಗೂ ತಮಿಳುನಾಡು ಚೆಕ್ ಪೋಸ್ಟ್ ಆದ ಹನೂರು ತಾಲೂಕಿನ‌ ಪಾಲರ್ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನವೊಂದರಲ್ಲಿ ದಾಖಲೆ ಇಲ್ಲದೆ 1,28,400ರೂ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಗುರುವಾರದಂದು ಜರುಗಿದೆ.

Written by - Manjunath Naragund | Last Updated : Mar 21, 2024, 07:32 PM IST
  • ಲೋಕಸಭಾ ಚುನಾವಣೆಯಲ್ಲಿ ಹಿನ್ನೆಲೆ ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು
  • ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ
  • ಕಾರು ಚಾಲಕ ಜೋಶ್ ಕೈನಾಂಡಿ ಅವರಿಂದ 1 ಲಕ್ಷ ರೂ. ಒಟ್ಟು 3.14 ಲಕ್ಷ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ
 Lok Sabha Election 2024: ಚಾಮರಾಜನಗರದ ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ಹಣ ಪೋಲೀಸರ ವಶಕ್ಕೆ  title=

Lok Sabha Election 2024: ಚಾಮರಾಜನಗರ: ಲೋಕಸಭಾ ಚುನಾವಣೆ ಹಿನ್ನೆಲೆ ಯಾವುದೇ ಅಕ್ರಮ ನಡೆಯದಂತೆ ಚಾಮರಾಜನಗರದಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು ಗಡಿ ಚೆಕ್ ಪೋಸ್ಟ್ ಗಳಲ್ಲಿ ಲಕ್ಷಾಂತರ ಹಣ ವಶಪಡಿಸಿಕೊಳ್ಳಲಾಗಿದೆ.ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 3 ಲಕ್ಷಕ್ಕೂ ಅಧಿಕ ಹಣವನ್ನು ಪೋಲೀಸರು ವಶಕ್ಕೆ ಪಡೆದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೊಸ್ಟ್ ನಲ್ಲಿ ನಡೆದಿದೆ.

ಲೋಕಸಭಾ ಚುನಾವಣೆಯಲ್ಲಿ ಹಿನ್ನೆಲೆ ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.ಈ ಮಧ್ಯೆ ಗುರುವಾರ ಖುದ್ದು ತಪಾಸಣೆಗೆ ಇಳಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಮತ್ತು ತಂಡ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಈಚರ್ ವಾಹನ ಚಾಲಕ ಹ್ಯಾರಿಸ್ ನಿಂದ 97 ಸಾವಿರ ರೂ., ಪಿಕ್ ಅಪ್ ಚಾಲಕ ಜಂಶೀರ್ ನಿಂದ 1,17 ಲಕ್ಷ ರೂ., ಹಾಗೂ ಕಾರು ಚಾಲಕ ಜೋಶ್ ಕೈನಾಂಡಿ ಅವರಿಂದ 1 ಲಕ್ಷ ರೂ. ಒಟ್ಟು 3.14 ಲಕ್ಷ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.ತಮಿಳುನಾಡಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ಮಾರ್ಗವಾಗಿ ರಾಜ್ಯ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪೊಲೀಸರು ಹಾಗು ಕಂದಾಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ತಪಾಸಣೆ ನಡೆಸುತ್ತಿದ್ದು, ವಾಹನ ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಬಿಸಿಲು ಜೋರು.. ದಾಹ ತಣಿಸುವ ಹಣ್ಣುಗಳ ಬೆಲೆ ತುಸು ಏರಿಕೆ

ಪಾಲಾರ್ ನಲ್ಲಿ 1.28 ಲಕ್ಷ ಹಣ ವಶ: 

ಕರ್ನಾಟಕ ಹಾಗೂ ತಮಿಳುನಾಡು ಚೆಕ್ ಪೋಸ್ಟ್ ಆದ ಹನೂರು ತಾಲೂಕಿನ‌ ಪಾಲರ್ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನವೊಂದರಲ್ಲಿ ದಾಖಲೆ ಇಲ್ಲದೆ 1,28,400ರೂ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಗುರುವಾರದಂದು ಜರುಗಿದೆ.ಲೋಕಸಭಾ ಚುನಾವಣೆ ಹಿನ್ನೆಲೆ ಹನೂರು ತಾಲ್ಲೂಕಿನ ತಮಿಳುನಾಡು ಗಡಿಯಂಚಿನಲ್ಲಿ ತೆರೆಯಲಾಗಿರುವ ಅಂತರ ರಾಜ್ಯ ಚೆಕ್ ಪೊಸ್ಟ್ ನಲ್ಲಿ ಚುನಾವಣೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಮೆಟ್ಟೂರಿನಿಂದ ಮೈಸೂರಿಗೆ  ತೆರಳುತ್ತಿದ್ದ ಪೀಕಪ್ ವಾಹನವನ್ನು ತಪಾಸಣೆಗೆ ಒಳಪಡಿಸಿದಾಗ  ನಗದು ಇರುವುದು ಕಂಡು ಬಂದಿರುತ್ತದೆ.ಹಣದ ಬಗ್ಗೆ ವಿಚಾರಿಸಿದಾಗ ಸ್ಪಷ್ಟ ಮತ್ತು ಸಮಂಜಸ ಉತ್ತರವನ್ನು ನೀಡದೇ ಇರುವಾಗ  ಪೊಲೀಸ್ ಸಿಬ್ಬಂದಿಗಳು  ಹಾಗೂ ಚುನಾವಣೆ ಅಧಿಕಾರಿಗಳ ತಂಡ  ಹಣವನ್ನು ಅಮಾನತುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ-ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಬಕಾರಿ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ: 

ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮ ಮದ್ಯ ಮಾರಾಟ ತಡೆಯಲು ಗುರುವಾರದಂದು ಅಬಕಾರಿ ಪೊಲೀಸರು ನಗರದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡರು.ಚಾಮರಾಜನಗರ ವಲಯ  ಹಾಗೂ ಜಿಲ್ಲಾ ಅಬಕಾರಿ ದಳ ಸಿಬ್ಬಂದಿಗಳು ಜಂಟಿಯಾಗಿ ನಗರದ ವಿವಿಧ ಮನೆಗಳಲ್ಲಿ ಅಕ್ರಮ ಮದ್ಯ ಸಂಗ್ರಹ ಕುರಿತು ದೂರು ಬಂದ ಹಿನ್ನೆಲೆ ಕಾರ್ಯಾಚರಣೆ ಕೈಗೊಂಡು  ಹನುಮಂತ, ಲಕ್ಷ್ಮಿ,  ಕಮಲಿ, ರಂಗಸ್ವಾಮಿ, ನಂಜಪ್ಪ ಎಂಬವರ ಮನೆ,  ಪೆಟ್ಟಿಗೆ ಅಂಗಡಿಯ ಮೇಲೆ ದಾಳಿ ನಡೆಸಿದರು.ಮನೆ ಹಾಗೂ ಅಂಗಡಿ ಮುಂಭಾಗ ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ನೀಡಿರುವುದು  ಕಂಡು ಬಂದಿದ್ದರಿಂದ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಮುಂದಿನ ಕ್ರಮ‌ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News