ಹೆಣ್ಣು ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು : ಸಚಿವ ದಿನೇಶ್ ಗುಂಡೂರಾವ್

Dinesh Gundurao : ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

Written by - Zee Kannada News Desk | Last Updated : Jan 24, 2024, 08:19 PM IST
  • ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದೆ
  • ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು
  • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು : ಸಚಿವ ದಿನೇಶ್ ಗುಂಡೂರಾವ್ title=

ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. 

ರಾಜ್ಯದಲ್ಲಿ ಭ್ರೂಣ ಹತ್ಯೆ ಈ ಪ್ರಮಾಣದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನ  ಸಹಿಸಲು ಸಾಧ್ಯವಿಲ್ಲ. ಇವತ್ತಿನ ಕಾಲಘಟ್ಟದಲ್ಲೂ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಾವು ಜಾಗೃತಿ ಮೂಡಿಸುವ ಪರಿಸ್ಥಿತಿ ಎದುರಾಗಿದೆ.  ಆದರೆ ಸರ್ಕಾರ ಹೆಣ್ಣು ಮಕ್ಕಳ ಸುರಕ್ಷಿತೆಗೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ 

ಭ್ರೂಣ ಹತ್ಯೆಗಳನ್ನ ತಡೆಯಲು ಈಗಾಗಲೇ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಪಡೆಗಳನ್ನ ರಚಿಸಿದೆ. ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಆರೋಗ್ಯ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆಗಳನ್ನ ಇನ್ನಷ್ಟು ಹೆಚ್ಚಿಸಲಾಗುವುದು. ನಕಲಿ ವೈದ್ಯರು ಹಾಗೂ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ನಕಲಿ ವೈದ್ಯರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಆರೋಗ್ಯ ಸೌಧದಲ್ಲಿ ಪಿಂಕ್ ಬಲೂನ್ ಗಳನ್ನ ತೇಲಿ ಬಿಡಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸೇರಿದಂತೆ ಸಾವಿರಾರು ಮಹಿಳಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಬೃಹತ್ ಕೇಕ್ ಕಟ್ ಮಾಡುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚಾರಣೆ ಆಚರಿಸಲಾಯಿತು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News