ಜಗತ್ತಿನಲ್ಲೇ ಮೊದಲು ಬಾರಿಗೆ ʼಗ್ಯಾರಂಟಿ ಯೋಜನೆʼ ಮೂಲಕ ಸಾವಿರಾರು ಕೋಟಿ ಬಡ ಜನರ ಕೈಗೆ ನೀಡಲಾಗುತ್ತಿದೆ 

ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಸರ್ಕಾರ ರಚನೆಯಾಗಿ ಕೇವಲ ಎರಡೇ ತಿಂಗಳಲ್ಲಿ ಆಶ್ವಾಸನೆ ನೀಡಿದ ಎಲ್ಲಾ ಯೋಜನೆಗಳನ್ನೂ ಜಾರಿಗೆ ತರುವ ಮೂಲಕ ಬಡ-ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Written by - Prashobh Devanahalli | Edited by - Krishna N K | Last Updated : Aug 19, 2023, 06:12 PM IST
  • ಎಲ್ಲಾ ಗ್ಯಾರಂಟಿ ಬಾಗ್ಯ ಯೋಜನೆಗಳೂ ಜಾರಿ
  • ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ
  • ಬಡವರ-ಮಹಿಳೆಯರ ಸಬಲೀಕರಣವೇ ಸರ್ಕಾರದ ಗುರಿ
ಜಗತ್ತಿನಲ್ಲೇ ಮೊದಲು ಬಾರಿಗೆ ʼಗ್ಯಾರಂಟಿ ಯೋಜನೆʼ ಮೂಲಕ ಸಾವಿರಾರು ಕೋಟಿ ಬಡ ಜನರ ಕೈಗೆ ನೀಡಲಾಗುತ್ತಿದೆ  title=

ಬೆಂಗಳೂರು : ದಿನೋಪಯೋಗಿ ವಸ್ತುಗಳ ಬೆಲೆ ದಿನನಿತ್ಯ ಏರಿಕೆಯಾಗುತ್ತಿದ್ದು, ಬಡವರ ಬದುಕು ದುಸ್ಥರವಾಗಿದೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಅನುಕೂಲವಾಗಲಿ, ಪ್ರತಿಯೊಂದು ಕುಟುಂಬಗಳಿಗೆ ತಿಂಗಳಿಗೆ 4 ರಿಂದ 5 ಸಾವಿರ ಹಣ ಉಳಿತಾಯವಾಗಲಿ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ 52 ಸಾವಿರ ಕೋಟಿ ರೂ. ಹಣವನ್ನು ಜನಪರ ಯೋಜನೆಯ ಅಡಿಯಲ್ಲಿ ಜನರ ಕೈಗೇ ನೀಡುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ವಾರ್ಡ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಗೃಹಲಕ್ಷ್ಮಿ ಮಂಜೂರಾತಿ ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೃಷ್ಣ ಬೈರೇಗೌ ಡ ಅವರು, “ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಸರ್ಕಾರ ರಚನೆಯಾಗಿ ಕೇವಲ ಎರಡೇ ತಿಂಗಳಲ್ಲಿ ಆಶ್ವಾಸನೆ ನೀಡಿದ ಎಲ್ಲಾ ಯೋಜನೆಗಳನ್ನೂ ಜಾರಿಗೆ ತರುವ ಮೂಲಕ ಬಡ-ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ ಕಾಂಗ್ರೆಸ್ ಬಡವರ ಪರ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಮಾಡಿದೆ” ಎಂದರು.

ಇದನ್ನೂ ಓದಿ:ಪ್ರಚಾರದಲ್ಲಿರಲು ಆರೋಪ : ಎಚ್ಡಿಕೆಗೆ ಸಂಸದ ಡಿ.ಕೆ.ಸುರೇಶ್ ಟಾಂಗ್

ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗಿದೆ. ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯೂ ಆಗಸ್ಟ್ ತಿಂಗಳಿನಿಂದಲೇ ಜಾರಿಯಾಗಿದ್ದು, ಶೂನ್ಯ ದರದ ಬಿಲ್ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಪ್ರತಿ ಮಹಿಳೆಯರಿಗೆ 2 ಸಾವಿರ ರೂ ಹಣವನ್ನು ನೀಡಲು ಸರ್ಕಾರ ಈಗಾಗಲೇ ರೂಪುರೇಷೆ ಸಿದ್ದಪಡಿಸಿದ್ದು, ನೋಂದಣಿಯನ್ನೂ ಆರಂಭಿಸಿಯಾಗಿದೆ. ಅನ್ನಭಾಗ್ಯದ ಅಡಿಯಲ್ಲಿ 5 ಕೆಜಿ ಅಕ್ಕಿ, ಉಳಿದ ಅಕ್ಕಿಯ ಬದಲಾಗಿ ಕೆ.ಜಿ.ಗೆ ₹34ರಂತೆ ₹750 ರೂ.ಹಣವನ್ನು ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಈ ಮೂಲಕ ಪ್ರತಿ ಮನೆಗೆ ಮಾಸಿಕ ₹4 ರಿಂದ ₹5 ಸಾವಿರ ಹಣ ಉಳಿತಾಯವಾಗಲಿದೆ. ಈ ಹಣವನ್ನು ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಸೇರಿದಂತೆ ಅಗತ್ಯ ವಿಚಾರಗಳಿಗೆ ಬಳಸಿಕೊಳ್ಳಬಹುದು. ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿರುವ ಬಡ-ಮಧ್ಯಮ ವರ್ಗದ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಯೋಜನೆಗಳು ಆಶಾಕಿರಣವಾಗಿದೆ. ಜನರ ಸಂಕಷ್ಟ ನಿವಾರಣೆಗಾಗಿ ₹52 ಸಾವಿರ ಕೋಟಿ ಹಣವನ್ನು ಜನರಿಗೇ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಈವರೆಗೆ ಜಗತ್ತಿನಲ್ಲಿ ಯಾರೂ ಮಾಡಲಾಗದ ಸಾಧನೆ ಮಾಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಭಾಗ್ಯಗಳ ಜೊತೆಗೆ ವಿಧವೆಯವರು, ವಯಸ್ಸಾವರು ಹಾಗೂ ಅಂಗವಿಕಲರನ್ನೂ ಹುಡುಕಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆದರೆ, ಅಧಿಕಾರದಲ್ಲಿದ್ದಾಗ ಯಾವ ಜನಪರ ಯೋಜನೆಗಳನ್ನೂ ಜಾರಿಮಾಡದ ಬಿಜೆಪಿ ನಾಯಕರು, ಕಾಂಗ್ರೆಸ್ ಘೋಷಿಸಿದ್ದ ಭಾಗ್ಯಗಳನ್ನು ಭೂಸಾ ಭಾಗ್ಯ, ಇದನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದರು. ನಾವು ಈ ಆರೋಪ-ಅಪಹಾಸ್ಯಗಳಿಗೆ ಕಿವಿಗೊಡದೆ ಜನರ ಮಾತಿಗೆ ಬದ್ಧವಾಗಿ ಕೇವಲ ಎರಡು ತಿಂಗಳಲ್ಲಿ ಎಲ್ಲಾ ಭಾಗ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದರು.

ಇದನ್ನೂ ಓದಿ: ಕರ್ಕಶ್ ಶಬ್ದದ ಸೈಲೆನ್ಸರ್ ಹಾಕಿಕೊಂಡು ಓಡಾಟ: ಧಾರವಾಡದಲ್ಲಿ ಬೈಕ್‌ ವಶಕ್ಕೆ
 
ಬಡವರಿಗೆ ಅಕ್ಕಿ ಕೊಡದ ಕೇಂದ್ರ: ಕೃಷ್ಣ ಬೈರೇಗೌಡ ಕಿಡಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಹೀಗಾಗಿ ನಿಗದಿತ ₹34ರ ದರದಂತೆ ಕರ್ನಾಟಕಕ್ಕೆ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಆರಂಭದಲ್ಲಿ ಅಕ್ಕಿ ನೀಡುವುದಾಗಿ ತಿಳಿಸಿ ಪತ್ರ ಬರೆದಿದ್ದ ಆಹಾರ ನಿಗಮ ಒಂದೇ ವಾರದಲ್ಲಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿಯಿತು.

ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಉಪಯೋಗವಾಗಲಿಲ್ಲ. ಆಹಾರ ನಿಗಮಗಳ ಗೋಧಾಮಿನಲ್ಲಿ ಅಕ್ಕಿ ಇದ್ದರೂ ಬಡವರಿಗೆ ನೀಡಲು ಮನಸ್ಸಿಲ್ಲದ ಕೇಂದ್ರ ಸರ್ಕಾರ ಆ ಅಕ್ಕಿಯನ್ನು ಹರಾಜಿಗಿಟ್ಟಿತು. ಕರ್ನಾಟಕ ಸರ್ಕಾರಕ್ಕೆ ಹರಾಜಿನಲ್ಲಿ ಪಾಲ್ಗೊಳ್ಳಲೂ ಅವಕಾಶ ನೀಡಲಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ತಾನು ಯಾವ ಕಾಲದಕ್ಕೂ ಬಡವರ ಪರ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: ಸರ್ಕಾರ ಬೀಳುತ್ತೇ ಅಂತ ಮೊನ್ನೆ ಅವರೇ ಗುಂಡಿಲಿ ಬಿದ್ದಿದ್ದಾರೆ

ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ನೀಡಲು ಸಹಕರಿಸದ ಕಾರಣ ಪ್ರತಿ ಕುಟುಂಬಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ  ₹34ರ ದರದಂತೆ ₹750 ರೂ. ನೀಡಲು ಸರ್ಕಾರ ನಿರ್ಧರಿಸಿದ್ದು, ಆ ಹಣವೂ ನಿಮ್ಮ ಖಾತೆಗೆ ನೇರ ಜಮೆಯಾಗಲಿದೆ. ಈ ಹಣವನ್ನು ಮಹಿಳೆಯರು ನಿಮಗೆ ಅಗತ್ಯವಾದ ಪೌಷ್ಠಿಕ ಆಹಾರಕ್ಕೆ ಬಳಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸಲಹೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News