ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ರಾಷ್ಟ್ರಪತಿ, ಪ್ರಧಾನಿ

ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ- ಪ್ರಧಾನಮಂತ್ರಿ ನರೇಂದ್ರ ಮೋದಿ  

Last Updated : Nov 1, 2019, 10:11 AM IST
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ರಾಷ್ಟ್ರಪತಿ, ಪ್ರಧಾನಿ title=
Photo Courtesy: ZeeKannada

ಬೆಂಗಳೂರು: ಕರುನಾಡು ಇಂದು 64ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ದೇಶದ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

Trending News