ಸುಮಲತಾ ಬಿಜೆಪಿಯೊಳಗೆ ಇರ್ತಾರೆ: ಸಚಿವ ಪ್ರಹ್ಲಾದ ಜೋಶಿ

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.

Written by - Yashaswini V | Last Updated : Feb 23, 2024, 01:06 PM IST
  • ಜೆಡಿ‌ಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಯಾವ ಕಾರಣಕ್ಕಾಗಿ ತಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೋ ಗೊತ್ತಿಲ್ಲ.
  • ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ.
ಸುಮಲತಾ ಬಿಜೆಪಿಯೊಳಗೆ ಇರ್ತಾರೆ: ಸಚಿವ ಪ್ರಹ್ಲಾದ ಜೋಶಿ title=

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಯೊಳಗೆ ಇರ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.

ಇದನ್ನೂ ಓದಿ- PINEWZನಲ್ಲಿ ಲೋಕಸಭೆ ಚುನಾವಣಾ ಸರ್ವೇ: ದೇಶದ ಪ್ರತಿಯೊಬ್ಬರೂ ಭಾಗವಹಿಸುವ ಸುವರ್ಣಾವಕಾಶ

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.

ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಲಿದೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

ಇದನ್ನೂ ಓದಿ- ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್

ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ: 
ಜೆ‌ಡಿ‌ಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಯಾವ ಕಾರಣಕ್ಕಾಗಿ ತಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೋ ಗೊತ್ತಿಲ್ಲ.  ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ. ತಮಗೆ ಆ ವಿಶ್ವಾಸವಿದೆ ಎಂದು ಪ್ರತಿಕ್ರಿಯಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News