ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

Written by - Puttaraj K Alur | Last Updated : Feb 18, 2024, 06:22 PM IST
  • ಮುಂಬರುವ ೨೦೨೪ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ
  • ರಾಜ್ಯದ ಜನರು ಈ ಸಾರಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ
  • ಬಿಜೆಪಿ ನಾಯಕರು ನಮ್ಮ ವಿರುದ್ಧ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ನಡೆಸುತ್ತಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೆವೆ: ಸಿಎಂ ಸಿದ್ದರಾಮಯ್ಯ title=
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಮಂಡ್ಯ: ಮುಂಬರುವ ೨೦೨೪ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼರಾಜ್ಯದಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆʼ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನರು ಈ ಸಾರಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಅಂತಾ ಗೊತ್ತಾಗಿದೆ. ಅದಕ್ಕೆ ಬಿಜೆಪಿ ನಾಯಕರು ನಮ್ಮ ವಿರುದ್ಧ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ನಡೆಸುತ್ತಿದ್ದಾರೆ. ಸ್ಥಳೀಯ ಶಾಸಕರು, ಕಾರ್ಯಕರ್ತರು, ಮತ್ತು ಮುಖಂಡರು ಹೇಳಿದಂತೆ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆನ್ನುವುದು ಯಾರು ಹೇಳುತ್ತಾರೋ ಅವರಿಗೆ ಟಿಕೆಟ್ ನೀಡುತ್ತೇವೆ. ಟಿಕೆಟ್‌ ಬಗ್ಗೆ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

ಇದನ್ನೂ ಓದಿ: ಫ್ಲೈ ಓವರ್ ಮೇಲೆ ಮೆಟ್ರೋ ಸೇರಿ ಬೆಂಗಳೂರಿಗೆ ಹೊಸ ರೂಪ ನೀಡಲು ನಾನಾ ಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

ಬಜೆಟ್ ಬಗ್ಗೆ ವಿಪಕ್ಷ ನಾಯಕರ ಟೀಕೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರಿಗೆ ಬಜೆಟ್ ಅರ್ಥ ಆಗಿಲ್ಲ. ಹೀಗಾಗಿ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಬಡವರ ವಿರೋಧಿ ಯಾರು ಇರುತ್ತಾರೋ ಅವರಿಗೆ ಬಜೆಟ್ ಅರ್ಥವಾಗುವುದಿಲ್ಲ. ನಾವು ಹೇಳಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ, ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ಹೇಳಿದರು.

ಬಿಜೆಪಿ ಪಕ್ಷ ಯಾವಾಗಲೂ ಬುರುಡೆ ಬಿಡುತ್ತಲೇ ಬಂದಿದೆ. ಬಿಜೆಪಿಯವರೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ನಮಗೆ ಒಂದೇ ಪಕ್ಷವಿರುವುದು. ಜೆಡಿಎಸ್ ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಜೆಡಿಎಸ್‌ನವರು ಬಿಜೆಪಿಯೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಯ್ತು ಟಿಕೆಟ್‌ ಫೈಟ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News