ಹೃತಿಕ್ ರೋಷನ್‌ ಹಿಡಿದು ವಿರಾಟ್‌ ಕೊಹ್ಲಿ ವರೆಗೆ ಈ 6 ಸೆಲೆಬ್ರಿಟಿಗಳು ಅಂಬಾನಿ ಕಾರ್ಯಕ್ರಮಕ್ಕೆ ಬಂದಿಲ್ಲ..! ಏಕೆ ಗೊತ್ತೆ..?

Celebrities not attended Ambani Pre Wedding : ಕಳೆದ ಕೆಲವು ದಿನಗಳ ಹಿಂದೆ ಜಾಮ್‌ನಗರದಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಬಾಲಿವುಡ್, ಹಾಲಿವುಡ್‌, ಸೇರಿದಂತೆ ಸೆಲೆಬ್ರಿಟಿಗಳ ದಂಡೇ ನೆರೆದಿತ್ತು. 3 ದಿನಗಳ ಈ ಈವೆಂಟ್‌ನಲ್ಲಿ ಅಮಿತಾಭ್ ಬಚ್ಚನ್‌ನಿಂದ ಹಿಡಿದು ಕಿಯಾರಾ ಅದ್ವೈವರೆಗೆ ಬಾಲಿವುಡ್ ಸೆಲೆಬ್ರಿಟಿಗಳು ಕಾಣಿಸಿಕೊಂಡರು. ಆದರೆ ಸಮಾರಂಭದಲ್ಲಿ ಕೆಲವು ಸೆಲೆಬ್ರಿಟಿಗಳು ಕಾಣಲಿಲ್ಲ. ಅವರು ಯಾರು.. ಏಕೆ ಬರಲಿಲ್ಲ.. ಇಲ್ಲಿದೆ ವಿವರ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಸಮಾರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಜೋಡಿ ಕಾಣಿಸಿಕೊಂಡಿರಲಿಲ್ಲ. ನಟಿ ತನ್ನ ಕುಟುಂಬದೊಂದಿಗೆ ರಜೆಯಲ್ಲಿದ್ದು, ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅಂಬಾನಿ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. 

2 /5

ಫೆಬ್ರವರಿ 21 ರಂದು ರಾಕುಲ್ ಮತ್ತು ಜಾಕಿ ವಿವಾಹವಾದರು. ಅನಂತ್ ಮತ್ತು ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮವು ಮಾರ್ಚ್ 1 ರಿಂದ ಮಾರ್ಚ್ 3 ರವರೆಗೆ ನಡೆಯಿತು. 1ರಂದು ಜಾಕಿ ಜೊತೆ ರಾಕುಲ್‌ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದರು. ಈ ಹಿನ್ನೆಲೆ ಅಂಬಾನಿ ಕಾರ್ಯಕ್ರಮಕ್ಕೆ ಬಂದಿಲ್ಲ.

3 /5

ಅಂಬಾನಿ ಕಾರ್ಯಕ್ರಮದಲ್ಲಿ ಹೃತಿಕ್ ರೋಷನ್ ಕೂಡ ಕಾಣಿಸಿಕೊಂಡಿಲ್ಲ. ಕೆಲವು ದಿನಗಳ ಹಿಂದೆ ಹೃತಿಕ್ ಸಾಮಾಜಿಕ ಜಾಲತಾಣದಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ಸ್ನಾಯು ಸೆಳೆತದಿಂದ ತುಂಬಾ ಬಳಲುತ್ತಿದ್ದೇನೆ ಅಂತ ತಿಳಿಸಿದ್ದರು. ಅನಾರೋಗ್ಯದ ಕಾರಣ ನಟ ಕಾರ್ಯಕ್ರಮಕ್ಕೆ ಬರದಿರಬಹುದು. 

4 /5

ಈ ಸಮಾರಂಭದಲ್ಲಿ ಅಜಯ್ ದೇವಗನ್ ಕಾಣಿಸಿಕೊಂಡಿದ್ದರು ಆದರೆ ಕಾಜೋಲ್ ಕಾಣಿಸಿಕೊಂಡಿರಲಿಲ್ಲ. ಕೆಲಸದ ಬದ್ಧತೆಯಿಂದಾಗಿ ಕಾಜೋಲ್ ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. 

5 /5

ಅನುಷ್ಕಾ ಶರ್ಮಾ ಚೋಟೆ ವಿರಾಟ್ ಅಕಾಯ್‌ಗೆ ಜನ್ಮ ನೀಡಿದ್ದಾರೆ. ನಟಿ ತನ್ನ ಕುಟುಂಬದೊಂದಿಗೆ ಲಂಡನ್‌ನಲ್ಲಿದ್ದಾರೆ. ಈ ಕಾರಣದಿಂದ ನಟಿ ಅನಂತ್‌ ಅಂಬಾನಿ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಲಿಲ್ಲ.