IPL 2022, MI vs RR: ಮುಂಬೈ ಇಂಡಿಯನ್ಸ್‌ಗೆ ರಾಜಸ್ಥಾನ್ ರಾಯಲ್ಸ್ ಸವಾಲು

ಸನ್‍ರೈಸರ್ಸ್‍ ಹೈದರಾಬಾದ್ ವಿರುದ್ಧ ಮೊದಲ ಪಂದ್ಯದಲ್ಲಿ 61 ರನ್‍ಗಳ ಭರ್ಜರಿ ಗೆಲುವು ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ.

Written by - Puttaraj K Alur | Last Updated : Apr 2, 2022, 01:26 PM IST
  • ಇಂದು ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಮುಖಾಮುಖಿ
  • ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿರುವ ರೋಹಿತ್ ಶರ್ಮಾ ಪಡೆ
  • ಮತ್ತೊಂದು ಗೆಲುವಿನ ಮೇಲೆ ಕಣ್ಣೀಟ್ಟಿರುವ ಸಂಜು ಸ್ಯಾಮ್ಸನ್ ಬಳಗ
IPL 2022, MI vs RR: ಮುಂಬೈ ಇಂಡಿಯನ್ಸ್‌ಗೆ ರಾಜಸ್ಥಾನ್ ರಾಯಲ್ಸ್ ಸವಾಲು  title=
ಮುಂಬೈ vs ರಾಜಸ್ಥಾನ್ ಮುಖಾಮುಖಿ

ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ(Indian Premier League 2022)ಯ 9ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ(MI vs RR)ಯಾಗುತ್ತಿವೆ. ಮುಂಬೈನ ಡಾ.ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಮಧ್ಯಾಹ್ನ 3.30ಕ್ಕೆ ಪಂದ್ಯ ನಡೆಯಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಈ ಪಂದ್ಯವು ತೀವ್ರ ಪೈಪೋಟಿಯಿಂದ ಕೂಡಿರಲಿದೆ.

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್(Mumbai Indians) ತನ್ನ ಮೊದಲ ಪಂದ್ಯದಲ್ಲಿಯೇ ದೆಹಲಿ ಕ್ಯಾಪಿಟಲ್ಸ್ ಎದುರು 4 ವಿಕೆಟ್‍ಗಳ ಸೋಲು ಕಂಡಿತ್ತು. ಹೀಗಾಗಿ ರೋಹಿತ್ ಪಡೆಗೆ ಈ ಪಂದ್ಯ ಬಹುಮುಖ್ಯವಾಗಿದೆ. ಬ್ಯಾಟಿಂಗ್-ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಬಲಿಷ್ಠವಾಗಿರುವ ರಾಜಸ್ಥಾನ್‍ಗೆ ಮುಂಬೈ ಹೇಗೆ ಸವಾಲು ಒಡ್ಡಲಿದೆ ಅನ್ನೋದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: IPL 2022, KKR vs PBKS: ರಸೆಲ್ ಅಬ್ಬರ, ಕೋಲ್ಕತ್ತಾಗೆ ಭರ್ಜರಿ ಗೆಲುವು

ಕಳೆದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಎದುರು ಅತ್ಯುತ್ತಮ ಪ್ರದರ್ಶನ ನೀಡಿದರೂ ಮುಂಬೈ ಸೋಲು ಕಾಣಬೇಕಾಯಿತು. ರೋಹಿತ್(Rohit Sharma) ಪಡೆಯ ಬೌಲಿಂಗ್ ವಿಭಾಗ ಮತ್ತಷ್ಟು ಪಕ್ವವಾಗಬೇಕಿದೆ. ಡೇತ್ ಓವರ್ ಗಳಲ್ಲಿ ಬೌಲರ್ ಗಳು ಹೆಚ್ಚು ರನ್ ಬಿಟ್ಟುಕೊಟ್ಟಿದ್ದರಿಂದ ಮುಂಬೈ ಸೋಲು ಕಾಣಬೇಕಾಯಿತು. ಹೀಗಾಗಿ ಹಳೆ ಪಂದ್ಯದ ತಪ್ಪುಗಳನ್ನು ಸರಿಪಡಿಸಿಕೊಂಡು ಆಡಿದರೆ ರೋಹಿತ್ ಪಡೆಗೆ ಗೆಲುವು ಸಿಗಲಿದೆ.

ಇನ್ನು ಸನ್‍ರೈಸರ್ಸ್‍ ಹೈದರಾಬಾದ್ ವಿರುದ್ಧ ಮೊದಲ ಪಂದ್ಯದಲ್ಲಿ 61 ರನ್‍ಗಳ ಭರ್ಜರಿ ಗೆಲುವು ಸಾಧಿಸಿರುವ ರಾಜಸ್ಥಾನ್ ರಾಯಲ್ಸ್(Rajasthan Royals)ಗೆಲುವಿನ ಉತ್ಸಾಹದಲ್ಲಿದೆ. ಎಲ್ಲಾ ವಿಭಾಗಗಳಲ್ಲಿಯೂ  ಸ್ಟ್ರಾಂಗ್ ಆಗಿರುವ ರಾಜಸ್ಥಾನ್ ತಂಡ ಮುಂಬೈ ಮೇಲೆಯೂ ಸವಾರಿ ಮಾಡವ ಸಾಮರ್ಥ್ಯ ಹೊಂದಿದೆ. ನಾಯಕ ಸಂಜು ಸ್ಯಾಮ್ಸನ್(Sanju Samson), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್ ರಾಜಸ್ಥಾನ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ.

ಇದನ್ನೂ ಓದಿ: IPL 2022: ಕ್ರಿಕೆಟ್ ಅಭಿಮಾನಿಗಳಿಗೆ ಯುಗಾದಿ ಉಡುಗೊರೆ

ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಕರುಣ್ ನಾಯರ್, ಜೇಮ್ಸ್ ನೀಶಮ್, ನವದೀಪ್ ಸೈನಿ ಅವರು ರಾಜಸ್ಥಾನ್ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಎರಡೂ ತಂಡಗಳು ತುಂಬಾ ಬಲಿಷ್ಠವಾಗಿರುವುದರಿಂದ ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಯುವ ನಿರೀಕ್ಷೆ ಇದೆ.

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅನ್ಮೋಲ್‌ಪ್ರೀತ್ ಸಿಂಗ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ನಾಥನ್ ಕೌಲ್ಟರ್-ನೈಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಕರುಣ್ ನಾಯರ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ನವದೀಪ್ ಸೈನಿ, ಕೆಸಿ ಕರಿಯಪ್ಪ, ಡೇರಿಲ್ ಮಿಚೆಲ್, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್

ಐಪಿಎಲ್‌ ಪಂದ್ಯ: 09

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್

ದಿನಾಂಕ: ಏಪ್ರಿಲ್ 02, ಶನಿವಾರ

ಸ್ಥಳ: ಮುಂಬೈನ ಡಾ. ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ  

ಸಮಯ: ಮಧ್ಯಾಹ್ನ 3.30ಕ್ಕೆ

=========================================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News