ರಾಜ್ಯದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು HDK ಹೇಳಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು ಪಾಪ ಹೆಚ್ಡಿಕೆ ಕೂಲಿ ಮಾಡಿ ರಾಜಕಾರಣ ಮಾಡ್ತಿದ್ದಾರೆ ಲಂಚ,ಸಹಾಯ, ದಾನ ಕೂಡ ಹೆಚ್ಡಿಕೆ ತೆಗೆದುಕೊಂಡಿಲ್ಲ ಪಾಪಾ ಅವರು ಹೇಳಲೆಬೇಕು.. ಅವರು ಹೇಳುವುದ್ದೇಲ್ಲ ಸತ್ಯ
ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಅಕ್ರಮ ಆಸ್ತಿ ಕೇಸನ್ನು ಸಿಬಿಐನಿಂದ ವಾಪಸ್ ಪಡೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ
ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಬೆಂಗಳೂರು ನಗರದ ವಿವಿಧೆಡೆ ಗೋಡೆಗಳ ಮೇಲೆ ಅಂಟಿಸಿದ ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ಪಕ್ಷ ದೂರು ನೀಡಿದೆ.
ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ, ಪಿಎಂ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ವರುಣಾ ಕ್ಷೇತ್ರವನ್ನು ನಿಮ್ಮ ಮಗನಿಗೆ ಹೊರಗುತ್ತಿಗೆ ಕೊಟ್ಟಿದ್ದೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನೀವು ಮತ್ತು ನಿಮ್ಮ ಮಗ ಫೋನ್ ನಲ್ಲಿ ಮಾತನಾಡಿದ್ದು ವರ್ಗಾವಣೆ ದಂಧೆಯ ಬಗ್ಗೆ ಎಂಬುದು ಸತ್ಯ ಎಂದು ಆರೋಪಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಚಿವ ಪ್ರಿಯಾಂಕ್ ಖರ್ಗೆಯವರು, ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್ರವರನ್ನು ಇನ್ನಿಲ್ಲದಂತೆ ಟಾರ್ಗೆಟ್ ಮಾಡಿ, ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
‘ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರ್ಕಾರ! ವಿಸ್ಮಯಗಳ ಆಗರ!!’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
‘ಕುಮಾರಸ್ವಾಮಿಗೆ ಹೀನಾಯ ಸೋಲಿನ ಹತಾಶೆ, ಅಧಿಕಾರ ಸಿಗದಿರುವ ಹತಾಶೆ, ಪಕ್ಷ ಖಾಲಿಯಾಗುತ್ತಿರುವ ಹತಾಶೆ ಮತ್ತು ಕಾರ್ಯಕರ್ತರ ಅಸಹಕಾರದ ಹತಾಶೆ. ಈ ಎಲ್ಲಾ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ವಿದ್ಯುತ್ತನ್ನೂ ಬಿಡದೆ ಕಳ್ಳತನ ಮಾಡಿದವರೊಬ್ಬರು ಸಮಾಜಕ್ಕೆ ಬುದ್ದಿ ಹೇಳುತ್ತೇನೆ ಎಂದು ಹೊರಡುವುದು ಪರಮಹಾಸ್ಯ’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Yathindra viral video : ಕಾಸಿಗಾಗಿ ಹುದ್ದೆ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ಸಾಮಾಜಿಕ ಜಾಲತಾನದ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ.
ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದರು.
ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ "ಎಸ್" ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು- ಸಿಎಂ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.