ಕ್ಷೇತ್ರದ ಜನತೆಗೆ ಯಾವ ತೊಂದರೆಯೂ ಆಗದ ರೀತಿಯಲ್ಲಿ ಸುವ್ಯವಸ್ಥೆ ಕಲ್ಪಿಸುವ ಹೊಣೆ ನಮ್ಮದು ಎಂದು ಬಾದಾಮಿ ಕ್ಷೇತ್ರದ ಜನತೆಗೆ ಅಲ್ಲಿನ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೆರೆ, ನದಿ ಮತ್ತು ತಗ್ಗು ಪ್ರದೇಶಗಳಿಗೆ ಹೋಗದಂತೆ ಜನರಿಗೆ ಸೂಚನೆ ನೀಡಲಾಗಿದೆ.
ಆಗಸ್ಟ್ 5 ರಿಂದ 7ರ ವರೆಗೆ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ಭಾರೀ ಮಳೆಯಿಂದಾಗಿ ಭಾನುವಾರ ಜನಜೀವನ ಅಸ್ತವ್ಯಸ್ತವಾಗಿತ್ತು. ಇದರ ಬೆನ್ನಲ್ಲೇ ಸೋಮವಾರ ಮತ್ತು ಮಂಗಳವಾರ ಮುಂಬೈನಲ್ಲಿ ತೀವ್ರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯು ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜನರು ಸಮುದ್ರ ತೀರಗಳಿಂದ ದೂರ ಉಳಿಯಲು ಸೂಚಿಸಿದೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಜಮ್ಮು ಮತ್ತು ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಊಹಿಸಲಾಗಿದೆ. ವಿಶೇಷವಾಗಿ ರಾಂಬನ್ ಮತ್ತು ಬನಿಹಾಲ್ ನಡುವಿನ ಪ್ರದೇಶದ ಭೂಕುಸಿತಕ್ಕೆ ಹೆಚ್ಚು ಗುರಿಯಾಗಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.