ಇಂಡಿಯನ್ ಸೈನ್ ಲಾಂಗ್ವೇಜ್ ನಲ್ಲಿ ಬಿಡುಗಡೆಯಾದ ಮೊದಲ ಚಿತ್ರ.. ZEE5 ನಿಂದ ವಿಶ್ವದಾಖಲೆ!

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ZEE5 ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರದಲ್ಲಿ 300 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಚಲನಚಿತ್ರವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.

Written by - Chetana Devarmani | Last Updated : Jun 18, 2022, 02:47 PM IST
  • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್
  • ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಚಿತ್ರ
  • ಇಂಡಿಯನ್ ಸೈನ್ ಲಾಂಗ್ವೇಜ್ ನಲ್ಲಿ ಬಿಡುಗಡೆಯಾದ ಮೊದಲ ಚಿತ್ರ
ಇಂಡಿಯನ್ ಸೈನ್ ಲಾಂಗ್ವೇಜ್ ನಲ್ಲಿ ಬಿಡುಗಡೆಯಾದ ಮೊದಲ ಚಿತ್ರ.. ZEE5 ನಿಂದ ವಿಶ್ವದಾಖಲೆ! title=
ದಿ ಕಾಶ್ಮೀರ ಫೈಲ್ಸ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ZEE5 ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರದಲ್ಲಿ 300 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಚಲನಚಿತ್ರವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.

ಇದನ್ನೂ ಓದಿ:  ʼಸೋರುತಿಹುದು ಮನಿಯ ಮಾಳಿಗೆʼ ಎನ್ನುತ್ತಾ ಹವಾ ಸೃಷ್ಟಿಸೋಕೆ ಬಂದ್ರು ALL OK

ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ವಿಮರ್ಶೆಗಳನ್ನು ಪಡೆದ ಈ ಚಿತ್ರವು ನಾಲ್ಕು ಭಾಷೆಗಳಲ್ಲಿ- ಹಿಂದಿ, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಲಭ್ಯವಿದೆ. ದಿ ಕಾಶ್ಮೀರ ಫೈಲ್ಸ್ ಬಾಕ್ಸ್ ಆಫೀಸ್‌ನಲ್ಲಿ ಹಲವಾರು ದಾಖಲೆಗಳನ್ನು ಮುರಿಯಿತು. ಇದು 300 ಕೋಟಿ ಗಡಿ ದಾಟಿದ ಸಾಂಕ್ರಾಮಿಕ ನಂತರದ ಮೊದಲ ಹಿಂದಿ ಚಲನಚಿತ್ರವಾಗಿದೆ. ZEE5 ಮುಂಬೈನಲ್ಲಿ ಭಾರತೀಯ ಸೈನ್ ಲಾಂಗ್ವೇಜ್‍ನಲ್ಲಿ ದಿ ಕಾಶ್ಮೀರ ಫೈಲ್ಸ್ ನ ವಿಶೇಷ ಪ್ರದರ್ಶನವನ್ನು ಆಯೋಜಿಸಿತ್ತು. ಇದರಲ್ಲಿ ಶ್ರವಣದೋಷವಿರುವ 500 ಜನರು ಹಾಜರಿದ್ದರು. ಅಗ್ನಿಹೋತ್ರಿ, ನಟಿ ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಕೂಡ ಭಾಗಿಯಾಗಿದ್ದರು. 

ಇದನ್ನೂ ಓದಿ: ನಟ ಪ್ರಭಾಸ್‌ಗೆ ಕೂಡಿಬಂದ ಕಂಕಣ ಭಾಗ್ಯ: ಬಾಹುಬಲಿ ಕೈಹಿಡಿಯೋ ದೇವಸೇನಾ ಇವರೇ!

ಇಂಡಿಯನ್ ಸೈನ್ ಲಾಂಗ್ವೇಜ್‍ನಲ್ಲಿ ಬಾಲಿವುಡ್ ವಾಣಿಜ್ಯ ಚಲನಚಿತ್ರವನ್ನು ಬಿಡುಗಡೆ ಮಾಡಿದ ಮೊದಲ ಒಟಿಟಿ ಎಂಬ ವಿಶ್ವದಾಖಲೆಯನ್ನು ZEE5 ಪಡೆದುಕೊಂಡಿದೆ. ದಿ ಕಾಶ್ಮೀರ್ ಫೈಲ್ಸ್ ಮಾರ್ಚ್ 11 ರಂದು ಬಿಡುಗಡೆಯಾಯಿತು. ಈ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟರಾದ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ನಟಿ ಪಲ್ಲವಿ ಜೋಶಿ ಮತ್ತು ನಟ ದರ್ಶನ್ ಕುಮಾರ್ ಅಭಿನಯಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News