ಕೊಲೆಸ್ಟ್ರಾಲ್ ಹೆಚ್ಚಾಗಿದ್ದರೆ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ

Cholesterol Mistakes: ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೂ ಜನರು ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳ ಕಾರಣದಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮತ್ತಷ್ಟು ಹೆಚ್ಚುತ್ತದೆ.  ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಷ್ಟು ಅದು ಪ್ರಾಣಕ್ಕೆ ಕುತ್ತು ಎನ್ನುವುದನ್ನು ಯಾವುದೇ ಕಾರಣಕ್ಕೂ ಮರೆಯಬಾರದು.    

Written by - Ranjitha R K | Last Updated : Aug 29, 2022, 08:14 AM IST
  • ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ಅನ್ನು ಸಮಸ್ಯೆ ಸಾಮಾನ್ಯವಾಗಿದೆ.
  • ಕೊಲೆಸ್ಟ್ರಾಲ್ ಹೆಚ್ಚಾದಾಗ ಪಾರ್ಶ್ವವಾಯು, ಟೈಪ್ 2 ಮಧುಮೇಹ, ಹೃದಯಾಘಾತದ ಅಪಾಯವಿರುತ್ತದೆ
  • ಕೆಟ್ಟ ಆಹಾರ ಪದ್ಧತಿ, ಜೀವನಶೈಲಿಯಿಂದ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗುತ್ತದೆ.
ಕೊಲೆಸ್ಟ್ರಾಲ್ ಹೆಚ್ಚಾಗಿದ್ದರೆ ತಪ್ಪಿಯೂ ಈ  ಕೆಲಸಗಳನ್ನು ಮಾಡಬೇಡಿ  title=
Cholesterol Mistakes (file photo)

Cholesterol Mistakes : ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ಅನ್ನು ಸಮಸ್ಯೆ ಸಾಮಾನ್ಯವಾಗಿದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ, ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಾಗ ಪಾರ್ಶ್ವವಾಯು, ಟೈಪ್ 2 ಮಧುಮೇಹ ಮತ್ತು ಹೃದಯಾಘಾತದಂತಹ ಕಾಯಿಲೆಗಳ ಅಪಾಯ ಕೂಡಾ ಹೆಚ್ಚುತ್ತದೆ. ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಪರಿಣಾಮವು ನೇರವಾಗಿ ಹೃದಯದ ಮೇಲೆ ಬೀಳುತ್ತದೆ. ಕೆಟ್ಟ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೂ ಜನರು ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳ ಕಾರಣದಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮತ್ತಷ್ಟು ಹೆಚ್ಚುತ್ತದೆ.  ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಷ್ಟು ಅದು ಪ್ರಾಣಕ್ಕೆ ಕುತ್ತು ಎನ್ನುವುದನ್ನು ಯಾವುದೇ ಕಾರಣಕ್ಕೂ ಮರೆಯಬಾರದು.  

ಕೊಲೆಸ್ಟ್ರಾಲ್ ಹೆಚ್ಚಾದಾಗ ಮಾಡುವ ಈ ತಪ್ಪುಗಳಿಗೆ ಭಾರೀ ಬೆಲೆ ತೆರಬೇಕಾಗಬಹುದು : 
ಅನಾರೋಗ್ಯಕರ ಆಹಾರವನ್ನು ತಿನ್ನುವುದು :
ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೂ ನಿರಂತರವಾಗಿ ಅನಾರೋಗ್ಯಕರ ಆಹಾರವನ್ನು ಸೇವಿಸುತ್ತಿದ್ದರೆ, ಆರೋಗ್ಯ ಸಂಪೂರ್ಣ ಹೆದಗೆಡಬಹುದು. ಕೊಲೆಸ್ಟ್ರಾಲ್ ಹೆಚ್ಚಾದಾಗ ಪ್ಯಾಕ್ ಮಾಡಿದ ಆಹಾರ, ಮಾಂಸ ಮತ್ತು ಸಂಸ್ಕರಿಸಿದ ಆಹಾರವನ್ನು ಸೇವಿಸಬಾರದು. ಇವುಗಳ ಸೇವನೆಯಿಂದ ಕೊಲೆಸ್ಟ್ರಾಲ್ ಪ್ರಮಾಣ ಮತ್ತಷ್ಟು ಹೆಚ್ಚುತ್ತದೆ.

ಇದನ್ನೂ ಓದಿ : Diabetes Diet: ಕಳಪೆ ಗುಣಮಟ್ಟದ ಹಿಟ್ಟಿನಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ ಎಚ್ಚರ!

ವ್ಯಾಯಾಮ ಮಾಡದೆ ಇರುವುದು : 
ವ್ಯಾಯಾಮ ಮಾಡದಿದ್ದರೆ, ಅಧಿಕ ಕೊಲೆಸ್ಟ್ರಾಲ್ ನಿಂದ ಸಮಸ್ಯೆ ಎದುರಿಸಬೇಕಾಗಿ ಬರಬಹುದು. ವ್ಯಾಯಾಮವು ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚಿಸುತ್ತದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದರೆ, ವ್ಯಾಯಾಮ ಮಾಡಬೇಕು.  

ಮದ್ಯಪಾನ : 
ಕೆಲವರಿಗೆ ಮದ್ಯ ಸೇವನೆ ಚಟವಿರುತ್ತದೆ. ಕೊಲೆಸ್ಟ್ರಾಲ್ ಅಧಿಕವಾಗಿದ್ದರೂ ಕುಇಡಿತಕ್ಕೆ ದಾಸನಾಗಿದ್ದರೆ, ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. 

ಇದನ್ನೂ ಓದಿ : Heart Attack Warning Signs: Flu ನ ಈ ಲಕ್ಷಣಗಳು ಹೃದಯಾಘಾತದ ಸಂಕೇತಗಳಾಗಿವೆ... ಎಚ್ಚರ!

ಧೂಮಪಾನ :
ಧೂಮಪಾನವು ದೇಹದಲ್ಲಿನ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಹೃದಯಾಘಾತದ ಅಪಾಯವನ್ನೂ ಹೆಚ್ಚಿಸುತ್ತದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಬೇಕಾದರೆ, ಧೂಮಪಾನವನ್ನು ಸಂಪೂರ್ಣವಾಗಿ  ನಿಲ್ಲಿಸಬೇಕು. 

 

 ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News