ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆಯೇ ಪ್ರಿಯಾಂಕಾ ಗಾಂಧಿ?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರದಂದು ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಲ್ಲ, ಆದರೆ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

Written by - Zee Kannada News Desk | Last Updated : Jan 21, 2022, 04:12 PM IST
  • ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರದಂದು ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಲ್ಲ, ಆದರೆ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆಯೇ ಪ್ರಿಯಾಂಕಾ ಗಾಂಧಿ? title=

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರದಂದು ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಲ್ಲ, ಆದರೆ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

ಇದನ್ನೂ ಓದಿ : Petrol Price Today : ಇಂದಿನ ಪೆಟ್ರೋಲ್ - ಡೀಸೆಲ್ ದರ ಬಿಡುಗಡೆ : ನಿಮ್ಮ ನಗರದ ಬೆಲೆ ಇಲ್ಲಿ ತಿಳಿಯಿರಿ

ಯುಪಿ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು 'ಕಾಂಗ್ರೆಸ್ ಪಕ್ಷದಿಂದ ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ?.ನೀವು ಎಲ್ಲೆಡೆ ನನ್ನ ಮುಖವನ್ನು ನೋಡುತ್ತಿದ್ದೀರಿ' ಎಂದು ಪ್ರಿಯಾಂಕಾ ಗಾಂಧಿ ತನ್ನ ಸಹೋದರ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು.

ಇದನ್ನೂ ಓದಿ : Narendra Modi : ಇಂಡಿಯಾ ಗೇಟ್‌ನಲ್ಲಿ ಸ್ಥಾಪನೆಯಾಗಲಿದೆ 'ಸುಭಾಷ್ ಚಂದ್ರ ಬೋಸ್ ಪ್ರತಿಮೆ'..! 

ನೀವೇ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಇನ್ನೂ ನಿರ್ಧರಿಸಿಲ್ಲ, ಅದು ನಿರ್ಧಾರವಾದ ಮೇಲೆ ಗೊತ್ತಾಗುತ್ತದೆ ಎಂದು ಉತ್ತರಿಸಿದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ, ಚುನಾವಣೆಯ ನಂತರ ಪರಿಸ್ಥಿತಿ ಉದ್ಭವಿಸಿದರೆ ಇತರ ಪಕ್ಷಗಳನ್ನು ಬೆಂಬಲಿಸುವ ಬಗ್ಗೆ ಪಕ್ಷವು ಖಂಡಿತವಾಗಿಯೂ ಪರಿಶೀಲಿಸುತ್ತದೆ ಎಂದು ಹೇಳಿದರು.ಆದಾಗ್ಯೂ, ಸರ್ಕಾರ ರಚನೆಗೆ ಅಂತಹ ಯಾವುದೇ ಬೆಂಬಲವನ್ನು ನೀಡುವಾಗ ಉತ್ತರ ಪ್ರದೇಶದಲ್ಲಿ ಯುವಜನರಿಗೆ, ವಿಶೇಷವಾಗಿ ಮಹಿಳೆಯರಿಗೆ, ಆದ್ಯತೆಯಾಗಿ ಕಾಂಗ್ರೆಸ್ ತನ್ನ ದೃಷ್ಟಿಕೋನವನ್ನು ಹೊಂದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ : LIC ಈ ಯೋಜನೆಗೆ ಬರೀ 1 ಪ್ರೀಮಿಯಂ ಪಾವತಿಸಿ ನಂತರ ಪ್ರತಿ ತಿಂಗಳು ಪಡೆಯಿರಿ ₹12,000!

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಯುವಕರ ಅಭಿಪ್ರಾಯಗಳು ಪ್ರಣಾಳಿಕೆಯಲ್ಲಿ ಪ್ರತಿಫಲಿಸುತ್ತದೆ.'ಕಾಂಗ್ರೆಸ್ ಉತ್ತರ ಪ್ರದೇಶದ ಯುವಕರನ್ನು ಸಂಪರ್ಕಿಸಿದೆ ಮತ್ತು ಅವರ ಅಭಿಪ್ರಾಯಗಳು ಪಕ್ಷದ 'ಯುವ ಪ್ರಣಾಳಿಕೆ'ಯಲ್ಲಿ ಪ್ರತಿಫಲಿಸುತ್ತದೆ' ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

 

Trending News