B.S.Yediyurappa: ಮುಂದಿನ ಚುನಾವಣೆಯಲ್ಲಿ ‘ಮಿಷನ್‌ 140’ ಹೊಸ ಟಾರ್ಗೆಟ್ ಮೇಲೆ ‌ಬಿಎಸ್‌ವೈ ಕಣ್ಣು!

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇಟ್ಟುಕೊಳ್ಳಲಾಗುವುದು. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ

Last Updated : Jan 3, 2021, 01:53 PM IST
  • ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇಟ್ಟುಕೊಳ್ಳಲಾಗುವುದು. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ
  • ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯನ್ನು
  • ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯ ಎಂದು ಅಭಿಪ್ರಾಯಪಟ್ಟರು.
B.S.Yediyurappa: ಮುಂದಿನ ಚುನಾವಣೆಯಲ್ಲಿ ‘ಮಿಷನ್‌ 140’ ಹೊಸ ಟಾರ್ಗೆಟ್ ಮೇಲೆ ‌ಬಿಎಸ್‌ವೈ ಕಣ್ಣು! title=

ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇಟ್ಟುಕೊಳ್ಳಲಾಗುವುದು. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ(BJP) ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯ ಎಂದು ಅಭಿಪ್ರಾಯಪಟ್ಟರು.

Coronavirus: ರಾಜ್ಯದಲ್ಲಿ ಶಾಲೆ ಆರಂಭವಾದ 'ಎರಡೇ ದಿನದದಲ್ಲಿ 18 ಶಿಕ್ಷಕರಿಗೆ ಕೊರೊನಾ ಸೋಂಕು'..!

ಇಬ್ಬರೇ ಶಾಸಕರಿದ್ದ ನಮ್ಮ ಪಕ್ಷ ಇವತ್ತು ಅಧಿಕಾರದಲ್ಲಿರಲು ಸಾವಿರಾರು ಜನ ಕಾರ್ಯಕರ್ತರ ತ್ಯಾಗ, ಬಲಿದಾನವೇ ಕಾರಣ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆ ಯಶಸ್ಸಿಗೆ ಸಾಮೂಹಿಕ ನೇತೃತ್ವ ಹಾಗೂ ಪರಿಶ್ರಮವೇ ಕಾರಣವಾಗಿದೆ. ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಯಶಸ್ಸಿನ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯ ಫಲಿತಾಂಶ ನಿಂತಿದೆ. ಆದ್ದರಿಂದ ಅಲ್ಲಿ ನಾವು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಪಕ್ಷ ಸಂಘಟನೆಗೆ ಒತ್ತು : ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ಕಾಂಗ್ರೆಸ್ ನಿರ್ಧಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3hDyh4G

Apple Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News