ಚಾಮರಾಜನಗರ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿ ಸಾವು: ಕಣ್ಣೀರಿಟ್ಟ ಕುರಿಗಾಹಿ

ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ

Written by - Manjunath N | Last Updated : May 10, 2024, 07:58 PM IST
  • ದೇವಮ್ಮ ಎಂಬುವವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು 10 ಕುರಿಗಳು ಸಾವನ್ನಪ್ಪಿದೆ
  • ಮಾಲೀಕರು ಎಂದಿನಂತೆ ಮಲ್ಲಯ್ಯನಪುರ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ
  • ಆದರೆ ವಿಷಕಾರಿ ಸೊಪ್ಪು ತಿಂದ 10 ಕುರಿಗಳು ಜಮೀನೊಂದರಲ್ಲಿ ಸಾವನ್ನಪ್ಪಿದೆ
ಚಾಮರಾಜನಗರ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿ ಸಾವು: ಕಣ್ಣೀರಿಟ್ಟ ಕುರಿಗಾಹಿ title=

ಚಾಮರಾಜನಗರ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವಮ್ಮ ಹಾಗು ದೇವಮ್ಮ ಎಂಬುವವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು 10 ಕುರಿಗಳು ಸಾವನ್ನಪ್ಪಿದೆ. ಮಾಲೀಕರು ಎಂದಿನಂತೆ ಮಲ್ಲಯ್ಯನಪುರ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. ಆದರೆ ವಿಷಕಾರಿ ಸೊಪ್ಪು ತಿಂದ 10 ಕುರಿಗಳು ಜಮೀನೊಂದರಲ್ಲಿ ಸಾವನ್ನಪ್ಪಿದೆ. ಇನ್ನು ಮೂರು ಕುರಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: SIT ಮುಂದೆ ಹಾಜರಾದ ಸರ್ಕಾರಿ ಅಧಿಕಾರಿಗಳು

ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News