ಚಾಮರಾಜನಗರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ: ಮೋದಿ, ಶಾ ವಿರುದ್ಧ ವಾಗ್ದಾಳಿ

Congress Road Show: ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

Written by - Yashaswini V | Last Updated : Apr 3, 2024, 03:01 PM IST
  • ನರೇಂದ್ರ ಮೋದಿ ಕೇವಲ ಸುಳ್ಳುಗಳನ್ನೇ ಹೇಳುತ್ತಾ ಬಂದಿದ್ದು ಸಾಧನೆ ಏನು ಮಾಡಿಲ್ಲ.
  • ಗೃಹ ಸಚಿವ ಅಮಿತ್ ಶಾ ಅವರು ಚನ್ನಪಟ್ಟಣಕ್ಕೆ ಬಂದು ರಾಜ್ಯದ ಸರ್ಕಾರದ ವಿರುದ್ಧ ಸುಳ್ಳಿನ ಸರಮಾಲೆಯನ್ನೇ ಹೇಳಿದ್ದಾರೆ
ಚಾಮರಾಜನಗರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ: ಮೋದಿ, ಶಾ  ವಿರುದ್ಧ ವಾಗ್ದಾಳಿ  title=

CM Siddaramaiah Road Show: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಸಿದ್ದರಾಮಯ್ಯ ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ರೋಡ್ ಶೋ (Road Show) ನಡೆಸಿದ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ- ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು: ಸಿಎಂ 

ನರೇಂದ್ರ ಮೋದಿ (PM Narendra Modi) ಕೇವಲ ಸುಳ್ಳುಗಳನ್ನೇ ಹೇಳುತ್ತಾ ಬಂದಿದ್ದು ಸಾಧನೆ ಏನು ಮಾಡಿಲ್ಲ. ಗೃಹ ಸಚಿವ ಅಮಿತ್ ಶಾ ಅವರು ಚನ್ನಪಟ್ಟಣಕ್ಕೆ ಬಂದು ರಾಜ್ಯದ ಸರ್ಕಾರದ ವಿರುದ್ಧ ಸುಳ್ಳಿನ ಸರಮಾಲೆಯನ್ನೇ ಹೇಳಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. 

ಬರ ಪರಿಹಾರಕ್ಕಾಗಿ ಆರಂಭದಲ್ಲೇ ಮನವಿ ಸಲ್ಲಿಸಿ ಸುಮಾರು 5 ತಿಂಗಳದಾದರೂ ಹಣ ಬಿಡುಗಡೆ ಮಾಡದೇ ಈಗ ಮನವಿಯನ್ನೇ ಕೊಟ್ಟಿಲ್ಲ ಎಂದು ಸುಳ್ಳು ಹೇಳಿದ್ದಾರೆ ಎಂದು ಹಿಂದಿಯಲ್ಲೇ ಡೈಲಾಗ್ ಹೊಡೆದು ಕಿಡಿಕಾರಿದರು.

ಇದನ್ನೂ ಓದಿ- ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್

ರಾಜ್ಯ, ದೇಶದ ತುಂಬಾ ಕಾಂಗ್ರೆಸ್ ಅಲೆ ಎದ್ದಿದೆ, ಚಾಮರಾಜನಗರದಲ್ಲಿ ಕಾಂಗ್ರೆಸ್ ಹುರುಪು ನೋಡುತ್ತಿದ್ದರೆ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ಲಕ್ಷಣ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ನುಡಿದಂತೆ ನಡೆದ ಸರ್ಕಾರವಾಗಿದ್ದು ಕೊಟ್ಟ ಭರವಸೆ ಈಡೇರಿಸಿದ್ದೇವೆ, ಬಿಜೆಪಿಯನ್ನು ಸೋಲಿಸಿ ಕಿತ್ತೊಗೆಯಬೇಕು ಎಂದು ಕರೆ ನೀಡಿದರು‌. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಮಾಹದೇವಪ್ಪ, ಸತೀಶ್ ಜಾರಕೊಹೊಳಿ, ಪರಮೇಶ್ವರ್, ವೆಂಕಟೇಶ್ ಹಾಗೂ ಅಭ್ಯರ್ಥಿ ಸುನಿಲ್ ಬೋಸ್ ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News