ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ "ಇದಕ್ಕೆ ಎಸ್‌ಐ‌ಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು. 

Written by - Yashaswini V | Last Updated : May 14, 2024, 11:53 AM IST
  • ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ
  • ದೇಶದಲ್ಲಿ ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ- ಡಿಸಿಎಂ ಡಿ‌ಕೆ ಶಿವಕುಮಾರ್
ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ title=

ಬೆಂಗಳೂರು: "ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರು, "ಮಹಾರಾಷ್ಟ್ರ ಮುಖ್ಯಮಂತ್ರಿ (Chief Minister of Maharashtra) ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಎಲ್ಲಾ ರಿವರ್ಸ್ ಆಗಬಹುದು" ಎಂದರು.

ಇದನ್ನೂ ಓದಿ- Lok Sabha Election: ವಾರಣಾಸಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ "ಇದಕ್ಕೆ ಎಸ್‌ಐ‌ಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು. 

ಡಿ.ಕೆ. ಶಿವಕುಮಾರ್ (DK Shivakumar) ಕುತಂತ್ರ ಎಂದು ಅಶೋಕ್ ಮತ್ತು ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ "ಇದಕ್ಕೆಲ್ಲಾ ಉತ್ತರ ಕೊಡೋಣ" ಎಂದಷ್ಟೇ ಪ್ರತಿಕ್ರಿಯಿಸಿದರು. 

ಇದನ್ನೂ ಓದಿ- ಸರ್ಕಾರ ಬೀಳಿಸುವುದು ಕನಸಿನ ಮಾತು; ಬಿಜೆಪಿಗರು ಬೇಕಿದ್ದರೆ ಜೋಗದ ಗುಂಡಿಗೆ ಹಾರಲಿ!

ಹುಟ್ಟುಹಬ್ಬದ ಆಚರಣೆ ಬೇಡ! 
ಚುನಾವಣೆ ಪ್ರಚಾರದ ನಿಮಿತ್ತ ನಾನು ಬೇರೆ ಊರಿಗೆ ತೆರಳುತ್ತಿದ್ದು ನನ್ನ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಕಾರ್ಯಕರ್ತರು, ಮುಖಂಡರಿಗೆ ಮಾಧ್ಯಮಗಳ ಮೂಲಕ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News