ಪ್ರಜ್ವಲ್ ರೇವಣ್ಣ ಶೀಘ್ರವೇ ಶರಣಾಗುತ್ತಾರೆ: ಸಿ.ಎಸ್.ಪುಟ್ಟರಾಜು

Hassan Pen Drive Case: ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ.

Written by - Puttaraj K Alur | Last Updated : May 5, 2024, 02:13 PM IST
  • ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಶೀಘ್ರವೇ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ
  • ಪ್ರಕರಣ ಸಂಬಂಧ ಈಗಾಗಲೇ ಕಾನೂನು ಚರ್ಚೆ ನಡೆಯುತ್ತಿದೆ ಎಂದ ಸಿ.ಎಸ್.ಪುಟ್ಟರಾಜು
  • ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾನುವಾರ SIT ಅಧಿಕಾರಿಗಳಿಗೆ ಶರಣಾಗುತ್ತಾರಾ..?
ಪ್ರಜ್ವಲ್ ರೇವಣ್ಣ ಶೀಘ್ರವೇ ಶರಣಾಗುತ್ತಾರೆ: ಸಿ.ಎಸ್.ಪುಟ್ಟರಾಜು  title=
ಶೀಘ್ರವೇ ಪ್ರಜ್ವಲ್‌ ಬಂಧನ?

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಶೀಘ್ರವೇ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ನಾಯಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ನಂತರ ಮಾತನಾಡಿದ ಅವರು, ಪ್ರಕರಣ ಸಂಬಂಧ ಈಗಾಗಲೇ ಕಾನೂನು ಚರ್ಚೆ ನಡೆಯುತ್ತಿದೆ. ಶೀಘ್ರವೇ ಪ್ರಜ್ವಲ್ ಶರಣಾಗುತ್ತಾರೆ ಎಂದು ಹೇಳಿದ್ದಾರೆ.

ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ. ರೇವಣ್ಣ SIT ತನಿಖೆಗೆ ಹಾಜರಾಗಿದ್ದಾರೆ. ಅವರೇ ಮಹಿಳೆಯನ್ನು ಅಪಹರಿಸಿದ್ದರಾ? ಅಥವಾ ಬೇರೆ ಯಾರಾದರೂ ಅಪಹರಣ ಮಾಡಿದ್ದಾರೆಂಬುದರ ಬಗ್ಗೆ ತನಿಖೆ ನಡೆಯಲಿದೆ. ಈ ಬಗ್ಗೆ ಮಹಿಳೆಯ ಮಗ ದೂರು ದಾಖಲಿಸಿದ್ದ. ಇದರ ಪ್ರಕಾರ ತನಿಖೆ ನಡೆಯಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಕಾನೂನು ಏನಿದೆಯೋ ಅದರ ಪ್ರಕಾರ ಅವರು ನಡೆದುಕೊಳ್ಳಲಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಲಿದ್ದೇವೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ SIT

ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಸಿದ್ಧತೆ!

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾನುವಾರ SIT ಅಧಿಕಾರಿಗಳಿಗೆ ಶರಣಾಗುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಎಚ್‌.ಡಿ.ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರನ್ನು ಬಂಧಿಸಲು SIT ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್‌ ಆಗಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಸದ್ಯ ಪ್ರಜ್ವಲ್‌ ದುಬೈನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕ್‌ಔಟ್ ನೋಟಿಸ್‌ ಜಾರಿಯಾದ ಹಿನ್ನೆಲೆ ವಿಮಾನದಿಂದ ಇಳಿದ ನಂತರ ವಲಸೆ ಕೇಂದ್ರದ ಬಳಿಯೇ ಪ್ರಜ್ವಲ್ ಬಂಧನವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಗು ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News