Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..!

 Karnataka SSLC Results 2024 :ಈ ಬಾರಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ಲಿಂಗವಾರು ಫಲಿತಾಂಶವನ್ನು ನೋಡಿದಾಗ ಶೇ.65.90 ಗಂಡು ಮಕ್ಕಳು ಉತ್ತೀರ್ಣರಾಗಿದ್ದರೆ ಇನ್ನೊಂದೆಡೆಗೆ ಶೇ 81.11 ರಷ್ಟು ಬಾಲಕಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

Written by - Manjunath N | Last Updated : May 9, 2024, 11:15 AM IST
  • ಇನ್ನೂ ಪ್ರದೇಶವಾರು ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡಾಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.
  • ಶೇ 72.83 ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ
  • ಶೇ 74.17 ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ
 Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..! title=

 Karnataka SSLC Results 2024 :ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಪರೀಕ್ಷೆಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ಲಿಂಗವಾರು ಫಲಿತಾಂಶವನ್ನು ನೋಡಿದಾಗ ಶೇ.65.90 ಗಂಡು ಮಕ್ಕಳು ಉತ್ತೀರ್ಣರಾಗಿದ್ದರೆ ಇನ್ನೊಂದೆಡೆಗೆ ಶೇ 81.11 ರಷ್ಟು ಬಾಲಕಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇನ್ನೂ ಪ್ರದೇಶವಾರು ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡಾಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.ಶೇ 72.83 ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಶೇ 74.17 ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಅರಳಿದ ಪ್ರತಿಭೆ: 

ಮುಧೋಳ್ ದ ಸರ್ಕಾರಿ ಶಾಲೆ ಯ ಅಂಕಿತಾ ಬಸಪ್ಪ ಕೊನ್ನೂರ್.625ಕ್ಕೆ 625 ಅಂಕ ಪಡೆಯುವ ಮೂಲಕ ಈಗ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಆ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಯೊಂದು ಎಲ್ಲರಿಗೂ ಮಾದರಿಯಾಗಿದ್ದಾರೆ.

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆಗಳು: 

ಉಡುಪಿ ಪ್ರಥಮ ಸ್ಥಾನ - 94%

ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ- 92.12%

ಶಿವಮೊಗ್ಗ - 88.67%

50.59% ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News