Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ 

Karnataka SSLC Results 2024: ಕರ್ನಾಟಕ ಶಾಲೆಗಳ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

Written by - Manjunath N | Last Updated : May 9, 2024, 11:39 AM IST
  • ಕರ್ನಾಟಕ ಶಾಲೆಗಳ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
  • 2023-24ನೇ ಶೈಕ್ಷಣಿಕ ವರ್ಷಕ್ಕೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು.
  • ಮಂಡಳಿಯ ಅಧ್ಯಕ್ಷರು ನೀಡಿದ ಮಾಹಿತಿಯಂತೆ ಈ ಶೈಕ್ಷಣಿಕ ವರ್ಷದಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
 Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ  title=

Karnataka SSLC Results 2024: ಬೆಂಗಳೂರು.  ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ  ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಶೇ .76.91ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ  ಉತ್ತೀರ್ಣರಾಗಿದ್ದಾರೆ.

ರಾಜ್ಯದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಇಲ್ಲಿ ಕ್ರಮವಾಗಿ 94% ಮತ್ತು 92.12% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: KSEAB Karnataka SSLC Results 2024 Live Updates: SSLC ಫಲಿತಾಂಶ ಪ್ರಕಟ  : ನಿಮ್ಮ ಅಂಕ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ 

ಓರ್ವ ವಿದ್ಯಾರ್ಥಿನಿ  625 ಕ್ಕೆ 625  ಅಂಕಗಳನ್ನು ಪಡೆದಿದ್ದರೆ, ಏಳು ವಿದ್ಯಾರ್ಥಿಗಳು 624 ಅಂಕಗಳನ್ನು ಪಡೆದಿದ್ದಾರೆ.ಹದಿನಾಲ್ಕು ವಿದ್ಯಾರ್ಥಿಗಳು 623 ಅಂಕಗಳನ್ನು ಪಡೆದರೆ, 622 ಅಂಕಗಳೊಂದಿಗೆ ಇಪ್ಪತ್ತೊಂದು ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ. ಹೆಚ್ಚುವರಿಯಾಗಿ, ನಲವತ್ತನಾಲ್ಕು ವಿದ್ಯಾರ್ಥಿಗಳು 621 ಅಂಕಗಳನ್ನು ಹಾಗೂ ಅರವತ್ತನಾಲ್ಕು ವಿದ್ಯಾರ್ಥಿಗಳು 620 ಅಂಕಗಳನ್ನು ಗಳಿಸಿದ್ದಾರೆ.

ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

2023-24ನೇ ಶೈಕ್ಷಣಿಕ ವರ್ಷಕ್ಕೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಮಂಡಳಿಯ ಅಧ್ಯಕ್ಷರು ನೀಡಿದ ಮಾಹಿತಿಯಂತೆ ಈ ಶೈಕ್ಷಣಿಕ ವರ್ಷದಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News