ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯ

Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

Written by - Zee Kannada News Desk | Last Updated : Apr 19, 2024, 07:49 PM IST
  • ಶ್ರೀಧರ್ ಗೌಡ ಮತ್ತು ಕೃಷ್ಣೇಗೌಡರು ಒಟ್ಟಾಗಿ ಅರಕಲಗೋಡು ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಕೊಡಿಸ್ತಾರೆ: ಸಿ.ಎಂ.ಸಿದ್ದರಾಮಯ್ಯ ಭರವಸೆಯ ನುಡಿ
  • ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನ: ಸಿ.ಎಂ
  • ಹಾಸನದಲ್ಲಿ ಬದಲಾವಣೆ ಆಗಬೇಕು. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯ title=

Hassan Loksabha : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ನಡೆದ ಪ್ರಜಾಧ್ವನಿ2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 

ಶ್ರೀಧರ್ ಗೌಡ ಮತ್ತು ಕೃಷ್ಣೇಗೌಡರು ಇಬ್ಬರೂ ಒಟ್ಟಾಗಿ ಸಮಾನ ಮನಸ್ಕರಾಗಿ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇವರಿಬ್ಬರೂ ಒಟ್ಟಾಗಿ ಅರಕಲಗೋಡು ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಲೀಡ್ ಕೊಡಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು. 

ಇದನ್ನು ಓದಿ : IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆ

ವಿಧಾನಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿಯವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ "ಬಿ" ಟೀಮ್ ಎಂದಿದ್ದರು. ಆಗ ದೇವೇಗೌಡರು ಈ ಮಾತನ್ನು ವಿರೋಧಿಸಿದ್ದರು. ಈಗ ಅದೇ ದೇವೇಗೌಡರು ಹೋಗಿ ಮೋದಿಯವರ ಜತೆ ಜಮೆಯಾಗಿದ್ದಾರೆ. ರಾಹುಲ್ ಗಾಂಧಿ ಅವರ ಮಾತನ್ನು ದೇವೇಗೌಡರು ಸಾಬೀತು ಮಾಡಿದ್ದಾರೆ ಎಂದರು. 

ರಾಜ್ಯದ ಪರವಾಗಿ-ಹಾಸನ ಪರವಾಗಿ ಪ್ರಜ್ವಲ್ ರೇವಣ್ಣ ಬಾಯೇ ಬಿಡಲಿಲ್ಲ : 

ರಾಜ್ಯದ ಪರವಾಗಿ-ಹಾಸನ ಪರವಾಗಿ ಪ್ರಜ್ವಲ್ ರೇವಣ್ಣ ಪಾರ್ಲಿಮೆಂಟಿನಲ್ಲಿ ಬಾಯೇ ಬಿಡಲಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಿ ರಾಜ್ಯದ ಪರವಾಗಿ ಧ್ವನಿ ಎತ್ತುವ ಸಾಮರ್ಥ್ಯ ಇರುವ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು. 

ರಾಜ್ಯದ ಪಾಲಿನ ತೆರಿಗೆ ಪಾಲನ್ನೂ ಕೇಂದ್ರ ಸರ್ಕಾರ ಕೊಡಲಿಲ್ಲ. ಬರಗಾಲ ಬಂದಿದ್ದರೂ ನಮ್ಮ ಪಾಲನ್ನು ಕೊಟ್ಟಿಲ್ಲ. ಹೀಗಾಗಿ ನರೇಂದ್ರ ಮೋದಿಯವರು ಮತ್ತು ಬಿಜೆಪಿಯವರು ಯಾವ ಮುಖ ಹೊತ್ಕೊಂಡು ರಾಜ್ಯದ ಜನರಿಂದ ಮತ ಕೇಳುತ್ತಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು. 

ಇದನ್ನು ಓದಿ : ರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ

ಹಾಸನದಲ್ಲಿ ಬದಲಾವಣೆ ಆಗಬೇಕು. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು. 

ಇಡಿ ದೇಶದ ರೈತರ ಸಾಲ ಮನ್ನಾ  : 

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು. ಮೋದಿಯವರು ಅತ್ಯಂತ ಶ್ರೀಮಂತರ ಸಾಲವನ್ನು ಮಾತ್ರ ಮನ್ನಾ ಮಾಡಿದರು. ಆದರೆ ಕಾಂಗ್ರೆಸ್ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಈ ಬಾರಿ ಇದು ಮರುಕಳಿಸುತ್ತದೆ ಎಂದರು. 

ಹಾಗೆಯೇ ಮಹಿಳೆಯರ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಹಾಕುವುದೂ ಸೇರಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇವೆಲ್ಲವನ್ನೂ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. 

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಶಿವಲಿಂಗೇಗೌಡರು, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News