Babar Azam Honey Trap: ಹನಿಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ಖ್ಯಾತ ಕ್ರಿಕೆಟ್ ತಂಡದ ನಾಯಕ: ವೀಡಿಯೊ-ಫೋಟೋ ವೈರಲ್

Babar Azam Honey Trap: @niiravmodi ಖಾತೆಯಿಂದ ಟ್ವಿಟರ್‌ನಲ್ಲಿ ವೀಡಿಯೊ ಮತ್ತು ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಬಾಬರ್ ಆಜಮ್ ಎಂದು ಹೇಳಲಾಗಿದೆ. ಈ ವಿಡಿಯೋ ಇನ್ನೊಬ್ಬ ಪಾಕಿಸ್ತಾನಿ ಕ್ರಿಕೆಟಿಗನ ಗೆಳತಿಯೊಂದಿಗೆ ಚಾಟ್ ಮಾಡುತ್ತಿದ್ದಾನೆ. ಈ ವಿಡಿಯೋಗೆ “ನೀವು ಮಾಡಿದ್ದನ್ನು ಮರಳಿ ಪಡೆಯುತ್ತೀರಿ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

Written by - Bhavishya Shetty | Last Updated : Jan 16, 2023, 04:01 PM IST
    • ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸ್ವದೇಶಿ ಸರಣಿಯಲ್ಲಿ ಸೋಲನ್ನು ಎದುರಿಸಬೇಕಾಯಿತು
    • ಬಾಬರ್ ವೈಯಕ್ತಿಕ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್
    • ಇದರಿಂದಾಗಿ ಬಾಬರ್ ಹನಿ ಟ್ರ್ಯಾಪ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ
Babar Azam Honey Trap: ಹನಿಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ಖ್ಯಾತ ಕ್ರಿಕೆಟ್ ತಂಡದ ನಾಯಕ: ವೀಡಿಯೊ-ಫೋಟೋ ವೈರಲ್ title=
Babar Azam

Babar Azam Honey Trap: ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಸದ್ಯ ಭಾರೀ ಅಪವಾದವನ್ನು ಎದುರಿಸುತ್ತಿದ್ದಾರೆ. ಇದಕ್ಕೂ ಮುನ್ನ ಅವರ ನಾಯಕತ್ವದಲ್ಲಿ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸ್ವದೇಶಿ ಸರಣಿಯಲ್ಲಿ ಸೋಲನ್ನು ಎದುರಿಸಬೇಕಾಯಿತು. ಮತ್ತೊಂದೆಡೆ, ಕೆಲವು ವೈಯಕ್ತಿಕ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಬಾಬರ್ ಅಜಮ್ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಬಾಬರ್ ಹನಿ ಟ್ರ್ಯಾಪ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Virat Kohli: ಪತಿಯ ಸಾಧನೆಗೆ ಪತ್ನಿಯ ಮೆಚ್ಚುಗೆ: ಶತಕ ವೀರ ಕೊಹ್ಲಿಯ ಪೋಸ್ಟ್ ಹಾಕಿ ರೊಮ್ಯಾಂಟಿಕ್ ವಿಶ್ ಮಾಡಿದ ಅನುಷ್ಕಾ

@niiravmodi ಖಾತೆಯಿಂದ ಟ್ವಿಟರ್‌ನಲ್ಲಿ ವೀಡಿಯೊ ಮತ್ತು ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಬಾಬರ್ ಆಜಮ್ ಎಂದು ಹೇಳಲಾಗಿದೆ. ಈ ವಿಡಿಯೋ ಇನ್ನೊಬ್ಬ ಪಾಕಿಸ್ತಾನಿ ಕ್ರಿಕೆಟಿಗನ ಗೆಳತಿಯೊಂದಿಗೆ ಚಾಟ್ ಮಾಡುತ್ತಿದ್ದಾನೆ. ಈ ವಿಡಿಯೋಗೆ “ನೀವು ಮಾಡಿದ್ದನ್ನು ಮರಳಿ ಪಡೆಯುತ್ತೀರಿ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿಯಂತೆ ಹರಡಿವೆ. ಆದರೆ, ಬಾಬರ್ ಆಜಂ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

 

ಬಾಬರ್ ಅಜಮ್ ನಾಯಕತ್ವದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್‌ಗಳ ಸರಣಿಯಲ್ಲಿ ಪಾಕಿಸ್ತಾನ ಕ್ಲೀನ್ ಸ್ವೀಪ್ ಎದುರಿಸಬೇಕಾಯಿತು. ಪಾಕಿಸ್ತಾನದ ಕ್ರಿಕೆಟ್ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ಸಂಭವಿಸಿದೆ. ಪಾಕಿಸ್ತಾನ ತನ್ನ ನೆಲದಲ್ಲಿ ಕ್ಲೀನ್ ಸ್ವೀಪ್ ಎದುರಿಸಬೇಕಾಯಿತು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ 2-1 ಅಂತರದ ಸೋಲನ್ನು ಎದುರಿಸಬೇಕಾಯಿತು. ಇದರಿಂದಾಗಿ ಅವರ ನಾಯಕತ್ವದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

ಇದನ್ನೂ ಓದಿ: ಮಹಿಳಾ IPL ಮಾಧ್ಯಮ ಹಕ್ಕು ಪಡೆದ Viacom 18: 5 ವರ್ಷದ ಒಪ್ಪಂದಕ್ಕೆ BCCI ಪಡೆದ ಹಣವೆಷ್ಟು ಗೊತ್ತಾ?

ನಜಮ್ ಸೇಥಿ ಪಿಸಿಬಿ ಅಧ್ಯಕ್ಷರಾದ ನಂತರ ಮತ್ತು ಶಾಹಿದ್ ಅಫ್ರಿದಿ ಹಂಗಾಮಿ ಮುಖ್ಯ ಆಯ್ಕೆದಾರರಾದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಹಲವು ಬದಲಾವಣೆಗಳಾಗಿವೆ. ಶಾನ್ ಮಸೂದ್ ಅವರಿಗೆ ತಂಡದ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News