- ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
ಯುವತಿ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ವಿದ್ಯಾರ್ಥಿನಿ ಮೀನಾ 16 ವರ್ಷ. ಆರೋಪಿ ಪ್ರಕಾಶ್ ಎಂಬುವನಿಗೆ 32 ವರ್ಷ. ಬಾಲಕಿಯ ತಂದೆ-ತಾಯಿಗೆ ಒತ್ತಾಯ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಗೊತ್ತಾದ ಕೂಡಲೇ ತಿಳಿಹೇಳಿ ತಡೆದಿದ್ದರು. ವಿದ್ಯಾರ್ಥಿನಿಗೆ 18 ವರ್ಷ ತುಂಬಿದ ನಂತರ ಮದುವೆಯಾಗುವಂತೆ ಬುದ್ಧಿಹೇಳಿದ್ದಾರೆ.
Parameshwar On Prajwal Revanna Case : ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಒಂದು ವೇಳೆ ರೇವಣ್ಣ ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದಲ್ಲಿ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Rameswaram Cafe Bomb Blast: ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳು ತನಿಖೆಯನ್ನು ತೀವ್ರಗೊಳಿಸಿವೆ. ಜೊತೆಗೆ NIA ಮತ್ತು NSG ತಂಡದವರೂ ತನಿಖೆ ನಡೆಸುತ್ತಿದ್ದಾರೆ. FSL ಅಧಿಕಾರಿಗಳು ಈಗಾಗಲೇ ಸ್ಫೋಟದ ಮಾದರಿಗಳನ್ನು ಸಂಗ್ರಹಿಸಿ ಟೆಕ್ನಿಕಲ್ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.