ಈ ಕುರಿತು ಎನ್ಸಿಪಿ ನಾಯಕ ಶರದ್ ಪವಾರ್ ಅವರು ನನ್ನ ಕುಟುಂಬದ ಇಬ್ಬರು ಸದಸ್ಯರು ಈಗಾಗಲೇ ಸ್ಪರ್ಧಿಸುತ್ತಿದ್ದಾರೆ. ಅದಕ್ಕಾಗಿಯೇ ನಾನು ಚುನಾವಣಾ ಕಣದಿಂದ ಹೊರಗಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಶರದ್ ಪವಾರ್ ನಿವಾಸದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ರಾಹುಲ್ ಗಾಂಧಿ, ಫಾರೂಕ್ ಅಬ್ದುಲ್ಲಾ, ಅರವಿಂದ್ ಕೇಜ್ರಿವಾಲ್, ಚಂದ್ರಬಾಬು ನಾಯ್ಡು ಮತ್ತು ಮಮತಾ ಬ್ಯಾನರ್ಜಿ ಭಾಗಿಯಾಗಿದ್ದರು.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಡ್ ದಲ್ಲಿನ ವಿಧಾನಸಭಾ ಫಲಿತಾಂಶ ಬದಲಾವಣೆಗೆ ಮುನ್ನುಡಿ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.ಇದು ಬಿಜೆಪಿ ನೇತೃತ್ವದ ಸರಕಾರದ ನೀತಿಗಳನ್ನು ಜನರು ನಿರಾಕರಿಸಿದ್ದಾರೆ ಎಂದು ಹೇಳಿದರು.
2019 ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಸರಕಾರದಲ್ಲಿ ಬದಲಾವಣೆಯುಂಟಾಗಲಿದೆ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಇಂಡಿಯಾ ಟುಡೆ ಮುಂಬೈ ಮಂಥನ್ ಕಾರ್ಯಕ್ರಮದಲ್ಲಿ ತಿಳಿಸಿದರು. "ಮಹಾರಾಷ್ಟ್ರದಲ್ಲಿ 2019 ರಲ್ಲಿ ರಾಜಕೀಯ ಸಮೀಕರಣಗಳು ಒಂದೇ ಆಗಿರುತ್ತವೆ ಎಂದು ನನಗೆ ಅನಿಸುವುದಿಲ್ಲ ಮಹಾರಾಷ್ಟ್ರ ಮತ್ತು ನವದೆಹಲಿಗಳಲ್ಲಿಯೂ ಬದಲಾವಣೆಗಳಾಗಳಿವೆ ಎಂದು ಪವಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.