ಗ್ರಾಮೀಣ ಕರೆಗಳಿಗೆ ಕಿವಿ ಆಗುವ ನೂತನ ಪಂಚಮಿತ್ರ ವಾಟ್ಸ್‍ಆ್ಯಪ್ ಚಾಟ್ ಸಂಖ್ಯೆ..!

ಗ್ರಾಮೀಣ ವಾಸಿಗಳು, ಸಾರ್ವಜನಿಕರು ತಮ್ಮ ಸಮಸ್ಯೆ, ಕರೆಗಳಿಗೆ ಕಿವಿ ಆಗಲು ರಾಜ್ಯ ಸರಕಾರ ಇತ್ತಿಚೆಗೆ ಪಂಚಮಿತ್ರ ಹೊಸ ಪೋಸ್ಟರ್ ವಾಟ್ಸ್‍ಆ್ಯಪ್ ಬಿಡುಗಡೆ ಮಾಡಿದ್ದು, ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಮಧ್ಯಾಹ್ನ, ಪಂಚಮಿತ್ರ ಕುರಿತ ಪೋಸ್ಟರ್, ಬ್ಯಾನರ್ ಪ್ರಚಾರ ಸಾಮಗ್ರಿಗಳನ್ನು ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಬಿಡುಗಡೆ ಮಾಡಿದರು.

Written by - Manjunath N | Last Updated : Mar 5, 2024, 07:52 PM IST
  • ಮೊದಲಿಗೆ ಹಾಯ್ ಎಂಬ ಸಂದೇಶ ಕಳುಹಿಸಬೇಕು. ಆಗ ಪರದೆ ಮೇಲೆ ಭಾಷೆ ಆಯ್ಕೆ ಅವಕಾಶ ಸಿಗಲಿದೆ.
  • ಬಳಿಕ ಜಿಲ್ಲೆ, ತಾಲೂಕು ಹಾಗೂ ನಿರ್ದಿಷ್ಟ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿಕೊಳ್ಳಬೇಕು.
  • ನಂತರ ಸೇವೆ, ಮಾಹಿತಿ, ಕುಂದುಕೊರತೆ ಎಂಬ ಮೂರು ಆಯ್ಕೆ ಮೂಡಲಿದ್ದು, ಅಗತ್ಯ ಸೇವೆಯನ್ನು ಪಡೆಯಬಹುದು.
ಗ್ರಾಮೀಣ ಕರೆಗಳಿಗೆ ಕಿವಿ ಆಗುವ ನೂತನ ಪಂಚಮಿತ್ರ ವಾಟ್ಸ್‍ಆ್ಯಪ್ ಚಾಟ್ ಸಂಖ್ಯೆ..! title=
file photo

ಧಾರವಾಡ: ಗ್ರಾಮೀಣ ವಾಸಿಗಳು, ಸಾರ್ವಜನಿಕರು ತಮ್ಮ ಸಮಸ್ಯೆ, ಕರೆಗಳಿಗೆ ಕಿವಿ ಆಗಲು ರಾಜ್ಯ ಸರಕಾರ ಇತ್ತಿಚೆಗೆ ಪಂಚಮಿತ್ರ ಹೊಸ ಪೋಸ್ಟರ್ ವಾಟ್ಸ್‍ಆ್ಯಪ್ ಬಿಡುಗಡೆ ಮಾಡಿದ್ದು, ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಮಧ್ಯಾಹ್ನ, ಪಂಚಮಿತ್ರ ಕುರಿತ ಪೋಸ್ಟರ್, ಬ್ಯಾನರ್ ಪ್ರಚಾರ ಸಾಮಗ್ರಿಗಳನ್ನು ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಬಿಡುಗಡೆ ಮಾಡಿದರು.

ನಂತರ ಅವರು ಮಾತನಾಡಿ, ಗ್ರಾಮೀಣ ಜನರ ಅಹವಾಲು, ಅಗತ್ಯ ಮಾಹಿತಿಗಳಿಗೆ ಪಂಚಮಿತ್ರ ಹೊಸ ವೇದಿಕೆಯಾಗಿದೆ. ಪ್ರತಿ ಗ್ರಾಮ ಪಂಚಾಯತ್, ಗ್ರಾಮ ಚಾವಡಿ ಮತ್ತು ಗ್ರಾಮದ ಜನಸಂದಣಿ ಸೇರುವ ಸ್ಥಳಗಳಲ್ಲಿ ಪಂಚಮಿತ್ರ ಪರಿಚಯಿಸುವ ಪ್ರಚಾರ ಸಾಮಗ್ರಿಗಳನ್ನು ಅಂಟಿಸಬೇಕು. ಗ್ರಾಮದಲ್ಲಿ ಜರುಗುವ ಕಾರ್ಯಕ್ರಮಗಳಲ್ಲಿ, ಗ್ರಾಮ ಪಂಚಾಯತ ಸಭೆಗಳಲ್ಲಿ ಪಂಚಮಿತ್ರದ ಬಳಕೆಯ ಉಪಯುಕ್ತತೆ, ಲಾಭಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕೆಂದು ಅವರು ತಿಳಿಸಿದರು.

ಪಂಚಮಿತ್ರದ ಪರಿಚಯ:

ಗ್ರಾಮ ಪಂಚಾಯತಿ ಮಟ್ಟದಲ್ಲಿರುವ ವಿವಿಧ ಇಲಾಖೆಗಳ ಸುಮಾರು 89 ಸೇವೆಗಳನ್ನು ನೀಡುವ ಮತ್ತು ಜನರ ಕುಂದುಕೊರತೆಗಳನ್ನು ಜನರು ಪಂಚಮಿತ್ರ ವಾಟ್ಸ್‍ಆ್ಯಪ್ ಮೂಲಕ ದಾಖಲಿಸಿ, ಪರಿಹಾರ ಪಡೆಯುವ ವಿನೂತನ ಪ್ರಯತ್ನವಿದು.

ಸಾರ್ವಜನಿಕರು, ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳಲ್ಲಿನ ವಿವಿಧ ಮಾಹಿತಿಯ ವಿವರಗಳನ್ನು ಪಡೆಯಲು ಹಾಗೂ ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ ಸೈಟ್ ಮತ್ತು ಪೋರ್ಟಲ್ ಗಳಿಗೆ ಭೇಟಿ ನೀಡಬೇಕಿತ್ತು. ಅಲ್ಲದೇ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳ ದಾಖಲಿಸಿ ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್ಗಳು ಇರಲಿಲ್ಲ. ಈ ಸಮಸ್ಯೆ ನೀಗಿಸಲು ಮತ್ತು ಗ್ರಾಮ ಪಂಚಾಯತ ಆಡಳಿತವನ್ನು ಜನಸ್ನೇಹಿಗೊಳಿಸಲು ರಾಜ್ಯ ಸರಕಾರ ಪಂಚಮಿತ್ರ ಪರಿಚಯಿಸಿ, ಅನುಷ್ಠಾನ ತಂದಿದೆ.

ಇದನ್ನೂ ಓದಿ- ಚಿಕ್ಕೋಡಿಯಲ್ಲಿ J.P ನಡ್ಡಾ ನೇತೃತ್ವದಲ್ಲಿ ಬೃಹತ್‌ ಕಾರ್ಯಕ್ರಮ

ಅದಕ್ಕೆ ಪೂರಕವಾಗಿ ರಾಜ್ಯ ಸರಕಾರದ ನೆರವಿನಲ್ಲಿ ಜಿಲ್ಲೆಯ 146 ಗ್ರಾಮ ಪಂಚಾಯತಿಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ಧಾರವಾಡ ಜಿಲ್ಲಾ ಪಂಚಾಯತ ಹೆಜ್ಜೆ ಇಟ್ಟಿದೆ. ಆದ್ದರಿಂದ ಇನ್ನು ಮುಂದೆ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಗಳ ಆಯ್ದ ಸೇವೆಗಳನ್ನು ವಾಟ್ಸ್‍ಆ್ಯಪ್ ಚಾಟ್ ಸೇವೆ ಮೂಲಕವೇ ಪಡೆಯಲು ಅವಕಾಶವಾಗಲಿದೆ. ಮತ್ತು ಇದರೊಂದಿಗೆ ಎಲ್ಲ ಗ್ರಾಮ ಪಂಚಾಯಿತಿಗಳ ಎಲ್ಲ ಸಭೆಗಳ ವೆಬ್ ಕಾಸ್ಟಿಂಗ್ ಆಗಲಿದ್ದು, ಜನರು ನೇರವಾಗಿ ವೀಕ್ಷಿಸಲು ಅವಕಾಶವಾಗಲಿದೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು ಪಂಚಮಿತ್ರ ಪರಿಣಾಮಕಾರಿ ಸಾಧನವಾಗಿದೆ.

ವಾಟ್ಸ್‍ಆ್ಯಪ್ ಚಾಟ್‍ಗೆ ಸಂಪರ್ಕ ಸಂಖ್ಯೆ 8277506000: ಈ ಪಂಚಮಿತ್ರ ಡಿಜಿಟಲ್ ಸೇವೆ ಪಡೆಯಲು ಸ್ಮಾರ್ಟಪೋನ್ ಅಗತ್ಯವಿದೆ. ಈ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಸಾರ್ವಜನಿಕರು ಚಾಟ್ ಮಾಡಬಹುದು.

ಮೊದಲಿಗೆ ಹಾಯ್ ಎಂಬ ಸಂದೇಶ ಕಳುಹಿಸಬೇಕು. ಆಗ ಪರದೆ ಮೇಲೆ ಭಾಷೆ ಆಯ್ಕೆ ಅವಕಾಶ ಸಿಗಲಿದೆ. ಬಳಿಕ ಜಿಲ್ಲೆ, ತಾಲೂಕು ಹಾಗೂ ನಿರ್ದಿಷ್ಟ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೇವೆ, ಮಾಹಿತಿ, ಕುಂದುಕೊರತೆ ಎಂಬ ಮೂರು ಆಯ್ಕೆ ಮೂಡಲಿದ್ದು, ಅಗತ್ಯ ಸೇವೆಯನ್ನು ಪಡೆಯಬಹುದು.

ಪಂಚಮಿತ್ರ ಪೋರ್ಟಲ್ ವಾಟ್ಸ್‍ಆ್ಯಪ್ ಚಾಟ್‍ನಲ್ಲಿ ಲಭ್ಯವಿರುವ ಸೇವೆ

ಮುಖ್ಯವಾಗಿ ಪಂಚಮಿತ್ರದಲ್ಲಿ ಗ್ರಾಮ ಪಂಚಾಯತ ಚುನಾಯಿತ ಜನಪ್ರತಿನಿಧಿಗಳ ವಿವರ, ಸಿಬ್ಬಂದಿಗಳ ವಿವರ

ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು ಸ್ವ ಸಹಾಯ ಗುಂಪಿನ ವಿವರಗಳು, 4 (1) (ಎ) & 4 (1) (ಬಿ) ಆರ್.ಟಿ.ಐ ದಾಖಲೆಗಳು, ಕಟ್ಟಡ ನಿರ್ಮಾಣ ಪರವಾನಗಿ, ಹೊಸ ನೀರು ಪೂರೈಕೆ ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯ ನಿರ್ವಹಣೆ, ಉದ್ದಿಮೆಯ ಪರವಾನಗೆ, ಸ್ವಾಧೀನ ಪ್ರಮಾಣ ಪತ್ರ, ರಸ್ತೆ ಅಗೆತಕ್ಕೆ ಅನುಮತಿ, ಕೈಗಾರಿಕೆ, ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು, ಹೊಸ ಇಲ್ಲವೇ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ಇದರೊಂದಿಗೆ ನಮೂನೆ 9/11ಎ, ನಮೂನೆ 11ಬಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗಳನ್ನು ಪಡೆಯಬಹುದು.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆ, ರಸ್ತೆ ಸಮಸ್ಯೆ, ಸೇತುವೆ ದುರಸ್ತಿ, ಮನರೇಗಾ ಯೋಜನೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಪಟ್ಟ 39 ರೀತಿಯ ಕುಂದುಕೊರತೆ ಗುರುತಿಸಲಾಗಿದೆ. ಈ ಸಮಸ್ಯೆಗಳ ಕುರಿತಂತೆ ಪೆÇೀರ್ಟಲ್ ಅಥವಾ ವಾಟ್ಸ್‍ಆ್ಯಪ್ ಮೂಲಕ ಅಹವಾಲು ಸಲ್ಲಿಸಿ ಪರಿಹಾರ ಪಡೆದುಕೊಳ್ಳಲು ಅವಕಾಶ ಇರುವುದು ವಿಶೇಷವಾಗಿದೆ.

ಇದನ್ನೂ ಓದಿ- ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ: ಡಿಸಿಎಂ ಡಿ.ಕೆ ಶಿವಕುಮಾರ್

ವಾಟ್ಸ್‍ಆ್ಯಪ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ. ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ. ವಾಟ್ಸ್‍ಆ್ಯಪ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಈ ಕೆಳಗಿನ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.

ಕಾರ್ಯಕ್ರಮದಲ್ಲಿ ಯೋಜನಾ ನಿರ್ದೇಶಕ ಬಸವರಾಜ ಹೆಗ್ಗಾನಾಯಕ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ ಮತ್ತು ಜಿಲ್ಲಾ ಕೈಗಾರಿಕೆ ಕೇಂದ್ರದ ಉಪನಿರ್ದೇಶಕ ಡಾ.ಭೀಮಪ್ಪ ಎಂ.ಎನ್., ಮತ್ತು ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಸಿಬ್ಬಂದಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News